Friday, June 5, 2026
Homeಕರಾವಳಿಮಾರ್ಚ್ 15 ರಂದು  ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭ

ಮಾರ್ಚ್ 15 ರಂದು  ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭ

- Advertisement -
- Advertisement -

ಮಂಗಳೂರು: ಮಾರ್ಚ್ 15 ರಂದು  ಮಂಗಳೂರು ವಿಶ್ವವಿದ್ಯಾನಿಲಯದ 41ನೇ ಘಟಿಕೋತ್ಸವ ಸಮಾರಂಭ  ನಡೆಯಲಿದೆ. ಮಂಗಳ ಗಂಗೋತ್ರಿಯಲ್ಲಿರುವ ಮಂಗಳ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಘಟಿಕೋತ್ಸವದಲ್ಲಿ ಬೆಂಗಳೂರಿನ ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ತಿನ ನಿರ್ದೇಶಕ ಪ್ರೊ. ಎಸ್.ಸಿ. ಶರ್ಮಾ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!