Friday, June 26, 2026
Homeಕರಾವಳಿಮಂಗಳೂರುಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಾಗಿ 15 ವರ್ಷದ ಬಾಲಕ ಸಾವು

ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಾಗಿ 15 ವರ್ಷದ ಬಾಲಕ ಸಾವು

- Advertisement -
- Advertisement -

ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಾಗಿ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಹಾಕಾಳಿಪಡ್ಪು ಬಳಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೂಲದ, ಪ್ರಸ್ತುತ ಮಹಾಕಾಳಿಪಡ್ಪುವಿನ ನಿರ್ಮಲ ನಗರದಲ್ಲಿ ವಾಸವಾಗಿರುವ ವರುಣ್ (15) ಮೃತ ದುರ್ದೈವಿ.


ಮಹಾಕಾಳಿಪಡ್ಪು ಅಂಡರ್‌ಪಾಸ್ ಬಳಿಯ ಭಜನ ಮಂದಿರದ ಹತ್ತಿರ ವರುಣ್ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದನು. ಆಟದ ವೇಳೆ ಚೆಂಡು ಮಂದಿರದ ಛಾವಣಿಯ ಮೇಲೆ ಬಿದ್ದಿತ್ತು. ಚೆಂಡನ್ನು ಹೆಕ್ಕಲು ಛಾವಣಿ ಏರಿದಾಗ ಆಕಸ್ಮಿಕವಾಗಿ ಮೇಲಿದ್ದ ವಿದ್ಯುತ್ ತಂತಿ ವರುಣ್‌ಗೆ ತಾಗಿದೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದಾನೆ .


ವರುಣ್ ತಂದೆ ಕಣ್ಣನ ಗೌಡ ಅವರು ಕಳೆದ 25 ವರ್ಷಗಳಿಂದ ಮಂಗಳೂರಿನಲ್ಲಿ ಸಣ್ಣ ಕ್ಯಾಂಟೀನ್ ನಡೆಸುತ್ತಾ ಜೀವನ ಸಾಗಿಸುತ್ತಿದ್ದಾರೆ. ವರುಣ್ ಇತ್ತೀಚೆಗಷ್ಟೇ ಎಸ್ಸೆಸೆಲ್ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದನು. ರಜೆಯ ಸಂಭ್ರಮದಲ್ಲಿದ್ದ ಮಗ ವಿಧಿವಶನಾಗಿರುವುದು ಕುಟುಂಬಸ್ಥರ ಆಕ್ರಂದನಕ್ಕೆ ಕಾರಣವಾಗಿದೆ.

- Advertisement -

Latest News

error: Content is protected !!