- Advertisement -


- Advertisement -
ಮಂಗಳೂರು : ಸುರತ್ಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಠಾಣಾ ವ್ಯಾಪ್ತಿಯಲ್ಲಿರುವ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ 6 ಜನ ಅಕ್ರಮ ಬಾಂಗ್ಲಾ ವಲಸಿಗರನ್ನು ಜು.10 ರಂದು ಪತ್ತೆಹಚ್ಚಿದ್ದಾರೆ.
ಈ ಕುರಿತು ವರದಿಯನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (FRRO)ಗೆ ಕಳುಹಿಸಲಾಗುತ್ತಿದೆ. ಎಫ್‌ಆರ್‌ಆರ್‌ಒ ಅಧಿಕಾರಿಗಳು ಬಂಧನದಲ್ಲಿಡುವ ಕುರಿತು ಅಗತ್ಯ ಆದೇಶ ಹೊರಡಿಸಿ, ಅವರನ್ನು ಭಾರತದಿಂದ ಗಡಿಪಾರು ಮಾಡುವ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
- Advertisement -


