
ಮಂಗಳೂರು: ಶಾಲೆಗೆ ತೆರಳುತ್ತಿದ್ದ 9ನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಾಗಲಕೋಟೆ ಮೂಲದ, ಗಾರೆ ಕೆಲಸ ಮಾಡುತ್ತಿದ್ದ ಗೂಡಾಸಾಬ್ ಯಾನೆ ಆಶಿಫ್ (23) ಬಂಧಿತ ಆರೋಪಿ. ಕಲ್ಲಾಪು ಬಳಿ ಬಾಡಿಗೆ ಮನೆಯಲ್ಲಿದ್ದ ಬಾಲಕಿಯನ್ನು ಆರೋಪಿ ಪುಸಲಾಯಿಸಿ ಕಾರಿನಲ್ಲಿ ಅಪಹರಿಸಿದ್ದನು. ಈ ಕುರಿತು ಬಾಲಕಿಯ ತಾಯಿ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಮಂಗಳವಾರ ರಾತ್ರಿಯೇ ಸೋಮೇಶ್ವರ ಪ್ರದೇಶದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು, ಅಪಹರಣಕ್ಕೊಳಗಾಗಿದ್ದ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಶಾಲೆಗೆ ತೆರಳುತ್ತಿದ್ದ 9ನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಾಗಲಕೋಟೆ ಮೂಲದ, ಗಾರೆ ಕೆಲಸ ಮಾಡುತ್ತಿದ್ದ ಗೂಡಾಸಾಬ್ ಯಾನೆ ಆಶಿಫ್ (23) ಬಂಧಿತ ಆರೋಪಿ. ಕಲ್ಲಾಪು ಬಳಿ ಬಾಡಿಗೆ ಮನೆಯಲ್ಲಿದ್ದ ಬಾಲಕಿಯನ್ನು ಆರೋಪಿ ಪುಸಲಾಯಿಸಿ ಕಾರಿನಲ್ಲಿ ಅಪಹರಿಸಿದ್ದನು. ಈ ಕುರಿತು ಬಾಲಕಿಯ ತಾಯಿ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಮಂಗಳವಾರ ರಾತ್ರಿಯೇ ಸೋಮೇಶ್ವರ ಪ್ರದೇಶದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು, ಅಪಹರಣಕ್ಕೊಳಗಾಗಿದ್ದ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


