Wednesday, June 3, 2026
HomeUncategorizedಮಂಗಳೂರು; ಪಣಂಬೂರಿನಲ್ಲಿ ಲಾರಿಗೆ ಬೈಕ್ ಗೆ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೆ ಸಾವು

ಮಂಗಳೂರು; ಪಣಂಬೂರಿನಲ್ಲಿ ಲಾರಿಗೆ ಬೈಕ್ ಗೆ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೆ ಸಾವು

- Advertisement -
- Advertisement -

ಮಂಗಳೂರು; ಲಾರಿಗೆ ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಫೆಬ್ರವರಿ 26 ರ ಸಂಜೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಮೃತರು.

ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೆಲಸ ಮುಗಿಸಿಕೊಂಡು ಬಿಜೈಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಲಾರಿಯೊಂದು ಹಿಂದಿನಿಂದ ಬಂದು ಢಿಕ್ಕಿ ಹೊಡೆದಿದೆ .  ಢಿಕ್ಕಿಯ ರಭಸಕ್ಕೆ ಅವರು ಲಾರಿಯ ಹಿಂಭಾಗದ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ನಿರೀಕ್ಷಕ ಶಿವಕುಮಾರ್ ಎಂ. ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

- Advertisement -

Latest News

error: Content is protected !!