Wednesday, June 24, 2026
Homeಕರಾವಳಿಮಂಗಳೂರುಮಂಗಳೂರು: ಕೇರಳದ ಕೊಟ್ಟಾಯಂನ ಕರುಕಾಚಲದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಕಾರು;  ಮಂಗಳೂರಿನ...

ಮಂಗಳೂರು: ಕೇರಳದ ಕೊಟ್ಟಾಯಂನ ಕರುಕಾಚಲದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಕಾರು;  ಮಂಗಳೂರಿನ ಯುವಕ ಸಾವು

- Advertisement -
- Advertisement -

ಮಂಗಳೂರು: ಕೇರಳದ ಕೊಟ್ಟಾಯಂನ ಕರುಕಾಚಲದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದು ಮಂಗಳೂರಿನ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ.  ಮೂಲತಃ ಮುಲ್ಕಿ ತಾಲೂಕಿನ ಅಂಗರಗುಡ್ಡೆ ನಿವಾಸಿ, ಪ್ರಸಕ್ತ ಕಾನದ ಚಿರಾಗ್ ಫ್ಲ್ಯಾಟ್ ನಲ್ಲಿ ವಾಸವಿದ್ದ ಶಾನವಾಝ್ ಯಾನೆ ಶಮೀಮ್(32) ಮೃತರು. ಇವರ ಜೊತೆ ಕಾರಿನಲ್ಲಿದ್ದ ಕಾಟಿಪಳ್ಳದ ಸಿರಾಜ್, ಕಾನ ನಿವಾಸಿ ಅಶ್ಫಾಕ್, ಸೂರಿಂಜೆ ನಿವಾಸಿ ಶಬೀರ್ ಹಾಗೂ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಸಿರಾಜ್ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.


ಕರುಕಾಚಲದಿಂದ ಕೊಟ್ಟಾಯಂಗೆ ಬರುತ್ತಿದ್ದ ಕಾರು ಚಂಪಕ್ಕರ ಆಶ್ರಮದಲ್ಲಿ 20 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿ ಐದು ಜನರಿದ್ದರು ಎಂದು ವರದಿಯಾಗಿದೆ. ಕಾರಿನಡಿಯಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಹೊರತೆಗೆಯಲು ಸುಮಾರು 20 ನಿಮಿಷಗಳು ಬೇಕಾಯಿತು ಎಂದು ರಕ್ಷಣಾ ಕಾರ್ಯಾಚರಣೆ ನಡೆಸಿದ ಸ್ಥಳೀಯರು ತಿಳಿಸಿದ್ದಾರೆ.

- Advertisement -

Latest News

error: Content is protected !!