- Advertisement -
- Advertisement -
ಮಂಗಳೂರು: ಪೊಲೀಸ್ ಕೇಸ್ ಗೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ.
ಐಟಿಐ ವಿದ್ಯಾರ್ಥಿಯಾಗಿರುವ ಧನುಷ್ ಡಿಸೆಂಬರ್11ರಂದು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಅಪಘಾತ ನಡೆಸಿದ್ದರು. ಧನುಷ್ ಬಳಿ ಡ್ರೈವಿಂದ್ ಲೈಸನ್ಸ್ ಇರಲಿಲ್ಲ. ಅಪಘಾತ ನಡೆದ ಮತ್ತೊಂದು ದ್ವಿಚಕ್ರ ವಾಹನ ಸವಾರನೊಂದಿಗೆ ಮಾತುಕತೆ ನಡೆದು ಆತನಿಗೆ ಹಣ ನೀಡಲು ಹಣ ಸಿಗದ ಕಾರಣ ಹಾಗೂ ಇದರಿಂದ ಕೇಸ್ ಆದರೆ ತೊಂದರೆಯಾಗುತ್ತದೆ ಎಂದು ಹೆದರಿ ಶುಕ್ರವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
- Advertisement -