Friday, October 9, 2026
Homeಕರಾವಳಿಮಂಗಳೂರುಮಂಗಳೂರು: 13 ವರ್ಷಗಳ ಹಳೆಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ!

ಮಂಗಳೂರು: 13 ವರ್ಷಗಳ ಹಳೆಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ!

- Advertisement -
- Advertisement -

ಮಂಗಳೂರು:ಪ್ರಕರಣವೊಂದರಲ್ಲಿ ಶಿಕ್ಷೆಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೇ ಸುದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಪುತ್ತೂರಿನ ನೆಲ್ಲಾಡಿ ಮೂಲದ, ಪ್ರಸ್ತುತ ನೆಕ್ಕಿಲಾಡಿಯಲ್ಲಿ ವಾಸವಿದ್ದ ಮೊಹಮ್ಮದ್ ಮುಸ್ತಾಫಾ ಅಲಿಯಾಸ್ ಮುಸ್ತಾಫಾ (36) ಬಂಧಿತ ಆರೋಪಿ.

2013ರಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸುಲಿಗೆ ಪ್ರಕರಣಕ್ಕೆ (ಅ.ನಂ. 59/2013) ಸಂಬಂಧಿಸಿದಂತೆ ಆರೋಪಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದ. ಆದರೆ, ಮೇಲ್ಮನವಿ ಸಲ್ಲಿಸಿದ ನಂತರ ನ್ಯಾಯಾಲಯಕ್ಕೆ ಹಾಜರಾಗದೆ ಗೈರುಹಾಜರಾಗಿದ್ದರಿಂದ ಹೈಕೋರ್ಟ್ ಆತನ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು.

ಅಕ್ಟೋಬರ್ 6ರಂದು ಆರೋಪಿಯ ವಿಳಾಸ ಪತ್ತೆಹಚ್ಚಿದ ಪೊಲೀಸರು, ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯ ಕ್ರಾಂತಿ ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ನೇತೃತ್ವದಲ್ಲಿ ಪಿಎಸ್‌ಐ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಈ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಠಾಣಾ ಸಿಬ್ಬಂದಿಯೂ ಭಾಗವಹಿಸಿದ್ದರು.

- Advertisement -

Latest News

error: Content is protected !!