Saturday, October 17, 2026
Homeಕರಾವಳಿಮಂಗಳೂರು: ಬೆಳ್ಳಂಬೆಳಗ್ಗೆ ಎಸಿಬಿ ದಾಳಿ, ಅಪಾರ ಚಿನ್ನಾಭರಣ, ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ತೆ

ಮಂಗಳೂರು: ಬೆಳ್ಳಂಬೆಳಗ್ಗೆ ಎಸಿಬಿ ದಾಳಿ, ಅಪಾರ ಚಿನ್ನಾಭರಣ, ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ತೆ

- Advertisement -
- Advertisement -

ಮಂಗಳೂರು: ಆದಾಯಕ್ಕೂ ಮೀರಿ ಆಸ್ತಿಗಳಿಸಿದ ಆರೋಪದ ಮೇಲೆ ಭ್ರಷ್ಟಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಕೆ‌.ಐ.ಎ.ಡಿ.ಬಿ ವಿಶೇಷ ಭೂಸ್ವಾಧೀನಾಧಿಕಾರಿ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಡಿ.19 ರಂದು 5 ಲಕ್ಷ ಲಂಚ ಸ್ವೀಕರಿಸಿ ಎಸಿಬಿ ಬಲೆಗೆ ಬಿದ್ದಿದ್ದ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡರ ಮಂಗಳೂರಿನ ಅಪಾರ್ಟ್ಮೆಂಟ್ ಗೆ ದಾಳಿ ನಡೆದಿದ್ದು, ಮಂಗಳೂರಿನಲ್ಲಿ ಒಂದು ಫ್ಲಾಟ್ ಸೇರಿ ಮೂರ್ನಾಲ್ಕು ಮನೆ ಪತ್ತೆ, ಬೆಂಗಳೂರು ಸೇರಿದಂತೆ ವಿವಿಧ ಕಡೆ 11 ಸೈಟ್, ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ.

ಸದ್ಯ ದಾಸೇಗೌಡ ಲಂಚ ಸ್ವೀಕಾರ ಆರೋಪದಡಿ ಅಮಾನತ್ತಿನಲ್ಲಿದ್ದಾರೆ. ಮಂಗಳೂರು ಗೋಲಿಬಾರ್ ಮತ್ತು ಕೊರೋನಾ ಕಳವಳ ಶುರುವಾದ ಹಿನ್ನಲೆಯಲ್ಲಿ ಈ ಕಾರ್ಯಾಚರಣೆಯನ್ನು ಎಸಿಬಿ ತಾತ್ಕಾಲಿಕವಾಗಿ ಮುಂದೂಡಿತ್ತು.

ಇಂದು ನಡೆದ ಕಾರ್ಯಾಚರಣೆಯ ನೇತೃತ್ವವನ್ನು ಮಂಗಳೂರು ಎಸಿಬಿ ಎಸ್ಪಿ ಉಮಾಪ್ರಶಾಂತ್, ಡಿವೈಎಸ್ಪಿ ಮಂಜುನಾಥ್, ಇನ್ಸ್ ಪೆಕ್ಟರ್ ಯೋಗೀಶ್ ಕುಮಾರ್ ವಹಿಸಿಕೊಂಡಿದ್ದರು.

- Advertisement -

Latest News

error: Content is protected !!