- Advertisement -
- Advertisement -
ಮಂಗಳೂರು: ಲಂಚ ಸ್ವೀಕರಿಸುವಾಗ ಪೊಲೀಸ್ ಇನ್ಸ್ಪೆಕ್ಟರ್ ಲೋಕಾ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಜ್ಪೆ ಇನ್‌ಸ್ಪೆಕ್ಟರ್ ಬಾಲಕೃಷ್ಣ ಅವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಇಲಾಖೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ.
₹25,000 ಲಂಚಕ್ಕೆ ಬೇಡಿಕೆಯಿಟ್ಟು ಈಗಾಗಲೇ ₹15,000 ಪಡೆದಿದ್ದ ಇನ್ಸ್‌ಪೆಕ್ಟರ್, ಬಾಕಿ ಮೊತ್ತದಲ್ಲಿ ₹5,000 ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಮಂಗಳವಾರ ಆರೋಪಿಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಈ ವೇಳೆ ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಗೆ ದಾಖಲಿಸುವಂತೆ ಬಾಲಕೃಷ್ಣ ಮಾಡಿದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಅವರಿಗೆ ಜೈಲು ಶಿಕ್ಷೆ (ನ್ಯಾಯಾಂಗ ಬಂಧನ) ಆದೇಶಿಸಿದೆ.
- Advertisement -


