- Advertisement -


- Advertisement -
ಮಂಗಳೂರು ಮೂಲದ ಟೆಕ್ಕಿ ಬೆಂಗಳೂರನಲ್ಲಿ ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಿಕ್ಷೇಪ್ ಬಂಗೇರ (24) ಮೃತರು.
ಮೂಲತಃ ಮಂಗಳೂರಿನ ನಿವಾಸಿಯಾಗಿರುವ ಬಂಗೇರ, ವಿದೇಶದಲ್ಲಿ ಇಂಜಿನಿಯರಿಂಗ್ ಮುಗಿಸಿ ತಂದೆ ತಾಯಿ ಜೊತೆ ಬಗಲಗುಂಟೆ ಪ್ರಿನ್ಸ್ ಅಪಾರ್ಟ್ಮೆಂಟ್ ವಾಸವಿದ್ದರು. ನಿಕ್ಷೇಪ್ ವರ್ಕ್ ಫ್ರಂ ಹೋಮ್ ನಲ್ಲಿದ್ದರು. ಅವರು ಸ್ಕಿಜೋಫ್ರೇನಿಯಾ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ಅಪಾರ್ಟ್‌ಮೆಂಟ್‌ನ 16ನೇ ಮಹಡಿಗೆ ಬಂದು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


