Saturday, June 13, 2026
Homeಕರಾವಳಿಮಂಗಳೂರುಮಂಗಳೂರು; ಉದ್ಯಮಿಗೆ ಹನಿಟ್ರ್ಯಾಪ್ ಆರೋಪ; ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ನಿಝಾಮ್...

ಮಂಗಳೂರು; ಉದ್ಯಮಿಗೆ ಹನಿಟ್ರ್ಯಾಪ್ ಆರೋಪ; ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ನಿಝಾಮ್ ಉಚ್ಛಾಟನೆ

- Advertisement -
- Advertisement -

ಮಂಗಳೂರು; ಉದ್ಯಮಿಗೆ ಹನಿಟ್ರ್ಯಾಪ್ ಆರೋಪದಲ್ಲಿ ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ನನ್ನು ಬಂಧಿಸಲಾಗಿದ್ದು ಅದರ ಬೆನ್ನಲ್ಲೇ ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ನಿಝಾಮ್ ನನ್ನು ಉಚ್ಛಾಟನೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಆದೇಶ ಹೊರಡಿಸಿದ್ದಾರೆ.

 ನಿಝಾಮ್ ಅವರ ಮೇಲೆ ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಆರೋಪ ಬಂದಿರುವುದು ಪಕ್ಷದ ಶಿಸ್ತು ಹಾಗೂ ಗೌರವಕ್ಕೆ ಧಕ್ಕೆ ಉಂಟುಮಾಡಿರುವುದು ಗಮನಕ್ಕೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಪಕ್ಷದ ಹಿತಾಸಕ್ತಿ ಮತ್ತು ಶಿಸ್ತು ಕಾಪಾಡುವ ದೃಷ್ಟಿಯಿಂದ ಅವರನ್ನು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಯುವ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ಸಿದ್ಧಾಂತ, ಮೌಲ್ಯಗಳು ಮತ್ತು ಸಂಘಟನೆಯ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ. ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಮುಂದೆಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದುಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!