Wednesday, June 24, 2026
Homeಕರಾವಳಿಮಂಗಳೂರುಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರತಿಷ್ಠಿತ ಕಾಲೇಜುಗಳಿಗೆ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರತಿಷ್ಠಿತ ಕಾಲೇಜುಗಳಿಗೆ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಪ್ರತಿಷ್ಠಿತ ಕಾಲೇಜುಗಳಿಗೆ ಮಾದಕವಸ್ತುವನ್ನು ಸರಬರಾಜು  ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.  ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿ ನಿವಾಸಿ ಮಹಮ್ಮದ್ ಅರ್ಷದ್ ಖಾನ್ (29) ಬಂಧಿತ ಆರೋಪಿ.

ಆರೋಪಿ ನಿಷೇಧಿತ ಮಾದಕವಸ್ತು ಎಮ್.ಡಿ.ಎಂ.ಎ, ಹೈಡ್ರೋವಿಡ್ ಗಾಂಜಾ ಮತ್ತು ಎಮ್.ಡಿ.ಎಂ.ಎ ಪಿಲ್ಸ್ ಅನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಬಂದು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ.

ಆರೋಪಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು 53.29 ಗ್ರಾಂ ಎಂಡಿಎಂಎ ಮತ್ತು 2.33 ಗ್ರಾಂ ಹೈಡ್ರೋವೀಡ್ ಗಾಂಜಾ ಮತ್ತು 0.45 ಗ್ರಾಂ MDMA PILLS ಅನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ದೇರಳಕಟ್ಟೆಯ ಪರಿಸರದಲ್ಲಿ  ನಿಂತುಕೊಂಡು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಿನಾಂಕ: 29-08-2025 ರಂದು ಮಾದಕ ವಸ್ತುವನ್ನು ಪತ್ತೆ ಹಚ್ಚಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂ. 10.85,000/- ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಹೈಡ್ರೋವಿಡ್ ಗಾಂಜಾ, MDMA PILLS ಮತ್ತು ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ಸಹಿತ ಒಟ್ಟು ರೂ. 11,05,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ  ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿರುತ್ತಾರೆ.

- Advertisement -

Latest News

error: Content is protected !!