Friday, July 4, 2025
Homeಕರಾವಳಿಮಂಗಳೂರುಮಂಗಳೂರು ; ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ  ಕುಖ್ಯಾತ ದನಕಳ್ಳನ...

ಮಂಗಳೂರು ; ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ  ಕುಖ್ಯಾತ ದನಕಳ್ಳನ ಸೆರೆ

spot_img
- Advertisement -
- Advertisement -

ಮಂಗಳೂರು ; ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನ್ನು ತಂದು ಮುಡಿಪು ಕಂಬಳ ಪದವು  ಕೆಐಡಿಬಿ ರಸ್ತೆಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 12.05 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿರುತ್ತಾರೆ. ಆಸೈಗೋಳಿಯಲ್ಲಿ ವಾಸವಿರುವ . ಅಬ್ದುಲ್ ಕಬೀರ್ @ ಪಾರಿವಾಳ ಕಬೀರ್(36) ಬಂಧಿತ ಆರೋಪಿ.

ಕಬೀರ್ ನನ್ನು ವಶಕ್ಕೆ ಪಡೆದುಕೊಂಡು ಆತನಿಂದ ರೂ. 1,20,000/- ಮೌಲ್ಯದ 12.05 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, KA-25-MA-8950ನೇ ನಂಬ್ರದ ಬಿಳಿ ಬಣ್ಣದ ಸ್ವೀಪ್ಟ್ ಕಾರು ಸಹಿತ ಒಟ್ಟು ರೂ. 4,31,250/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ  ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಬೀರ್ ವಿರುದ್ಧ  ಮಂಗಳೂರು ನಗರದ ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮಂಗಳೂರು ಪೂರ್ವ, ಕಂಕನಾಡಿ ನಗರ, ಉಳ್ಳಾಲ, ಬಜ್ಪೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆ, ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ 15 ಕ್ಕಿಂತ ಹೆಚ್ಚು ದನ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!