Tuesday, June 23, 2026
Homeಅಪರಾಧಎರಡು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ...

ಎರಡು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ ಮಂಗಳೂರು ನಗರ ಪೊಲೀಸರು

- Advertisement -
- Advertisement -

ಮಂಗಳೂರು: ಪಣಂಬೂರು ಗ್ರಾಮದ ತಣ್ಣೀರುಬಾವಿ ಟ್ರೀ ಪಾರ್ಕ್ ಬಳಿ ಇರುವ ಮೀನಗಾರಿಕಾ ಬೋಟ್ ಗಳನ್ನು ತಯಾರಿಸುವ ಮತ್ತು ರಿಪೇರಿ ಮಾಡುವ ಮಂಗಳಾ ಬೋಟ್ ಯಾರ್ಡ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗಳಿಬ್ಬರ ಜಗಳದಿಂದ ಕಳೆದ ಎರಡು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಘಟನೆಯ ವಿವರ: ದಿ 10-12-2023 ರಂದು ಪಣಂಬೂರು ಪೊಲೀಸ್ ಠಾಣಾ ಸರಹದ್ದಿನ ಪಣಂಬೂರು ಗ್ರಾಮದ ತಣ್ಣೀರುಬಾವಿ ಟ್ರೀ ಪಾರ್ಕ್ ಬಳಿ ಇರುವ ಮೀನಗಾರಿಕಾ ಬೋಟ್ ಗಳನ್ನು ತಯಾರಿಸುವ ಮತ್ತು ರಿಪೇರಿ ಮಾಡುವ ಮಂಗಳಾ ಬೋಟ್ ಯಾರ್ಡ್ ನಲ್ಲಿ ಕಬ್ಬಿಣದ ಕೆಲಸ ಮಾಡಿಕೊಂಡಿದ್ದ ಬಿನು.ಜಿ ಮತ್ತು ಮರದ ಕೆಲಸ ಮಾಡಿಕೊಂಡಿದ್ದ ಜಾನ್ಸ್ ನ್ ಎನ್.ವಿ ಅಲಿಯಾಸ್ ಬಿನೋಯ್ ಎಂಬವರುಗಳ ನಡುವೆ ಕೆಲಸದ ನಂತರ ತಾವುಗಳು ತಂಗುವ ಶೆಡ್ ನಲ್ಲಿ ಇಬ್ಬರೂ ಹಣಕಾಸಿನ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು.

ಆರೋಪಿ ಜಾನ್ಸನ್ ಎನ್.ವಿ ಅಲಿಯಾಸ್ ಬಿನೋಯ್ ಎಂಬಾತನು ಪ್ರಕರಣದಲ್ಲಿ ಮೃತಪಟ್ಟ ಬಿನುವಿನ ಎದೆಯ ಪಕ್ಕೆಗೆ ಕಬ್ಬಿಣದ ಉಳಿಯಿಂದ ಇರಿದು ಕೊಲೆ ಮಾಡಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ 102/2023 ಕಲಂ:302 ಐಪಿಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಬಗ್ಗೆ ತನಿಖೆ ಕೈಗೊಂಡು ಮಾನ್ಯ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕಲಂ:302 ಐಪಿಸಿ ರಂತೆ ದೋಷಾರೋಪಣಾ ಪತ್ರ ಸಲ್ಲಿಸಿರುವುದಾಗಿದೆ. ಮಾನ್ಯ ನ್ಯಾಯಾಲಯದಲ್ಲಿ ಎಸ್.ಸಿ ನಂಬ್ರ 58/2024 ರಂತೆ ವಿಚಾರಣೆ ನಡೆದು, ಪ್ರಕರಣದ ಆರೋಪಿ ಜಾನ್ಸ್ ನ್ ಎನ್.ವಿ ಅಲಿಯಾಸ್ ಬಿನೋಯ್ ಪ್ರಾಯ: 53 ವರ್ಷ, ತಂದೆ: ವರ್ಕಿ ವಾಸ: ನಿರ್ಪೇಲ್ಮನೆ, ಮಡಂತಟ್ಟು, ಚಪ್ಪರಪಡವು, ಕೂವೇರಿ, ಕಣ್ಣೂರು ಜಿಲ್ಲೆ, ಕೇರಳ ರಾಜ್ಯ ಎಂಬಾತನಿಗೆ ಕಲಂ:302 ಐಪಿಸಿ ಕಾಯ್ದೆ ಅಡಿಯಲ್ಲಿ 5 ವರ್ಷ ಸಾದಾ ಕಾರಾವಾಸ ಶಿಕ್ಷೆ ಮತ್ತು ಕಲಂ:304(2) ಐಪಿಸಿ ಕಾಯ್ದೆ ಅಡಿಯಲ್ಲಿ 25,000 ದಂಡ ವಿಧಿಸಿರುತ್ತದೆ. ಈ ಪ್ರಕರಣದಲ್ಲಿ ಆರೋಪಿತನು ಜಾಮೀನು ಸಿಗದೆ ಸುಮಾರು 3 ವರ್ಷ 2 ತಿಂಗಳಿನಿಂದ ವಿಚಾರಣಾ ಬಂದಿಯಾಗಿದ್ದ ಸಮಯದಲ್ಲಿ ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿತನ ಅಪರಾಧ ಸಾಭಿತಾಗಿ ಶಿಕ್ಷೆಯಾಗಿರುವುದಾಗಿದೆ.

ಪ್ರಕರಣದ ತನಿಖೆಯನ್ನು ಪಣಂಬೂರು ಪೊಲೀಸ್ ಠಾಣೆಯ ಆಗಿನ ಪ್ರಭಾರ ಪೊಲೀಸ್ ನಿರೀಕ್ಷಕರಾದ ಶ್ರೀ ಸಂದೀಪ್.ಜಿ.ಎಸ್ ಬಜಪೆ ಪೊಲೀಸ್ ಠಾಣೆ ರವರು ಭಾಗಶಃ ತನಿಖೆ ನಡೆಸಿ, ನಂತರ ಮಂಜುನಾಥ .ಎಂ.ಪೊಲೀಸ್ ನಿರೀಕ್ಷಕರು, ಪಣಂಬೂರು ಪೊಲೀಸ್ ಠಾಣೆ ರವರು ತನಿಖೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿರುತ್ತಾರೆ.

- Advertisement -

Latest News

error: Content is protected !!