Wednesday, June 3, 2026
Homeಕರಾವಳಿಮಂಗಳೂರುಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮ ದಿನಾಚರಣೆ

ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮ ದಿನಾಚರಣೆ

- Advertisement -
- Advertisement -

ಮಂಗಳೂರು; ಪ್ರತಿ ವರ್ಷ ಅಕ್ಟೋಬರ್ 21 ರಂದು ಕರ್ತವ್ಯ ನಿರ್ವಹಣೆಯ ಸಮಯ ತಮ್ಮ ಪ್ರಾಣ ಕಳೆದುಕೊಂಡ ಪೊಲೀಸರ ಸ್ಮರಣಾರ್ಥ ಪೊಲೀಸ್ ಹುತಾತ್ಮ ದಿನವೆಂದು ಸ್ಮರಿಸಲಾಗುತ್ತಿದ್ದು, ಮಂಗಳೂರು ನಗರ ಪೊಲೀಸ್ ವತಿಯಿಂದಲೂ ಈ ದಿನ ಕಛೇರಿ ಆವರಣದಲ್ಲಿ ಪೊಲೀಸ್ ಹುತಾತ್ಮ ದಿನ ಆಚರಿಸಲಾಯಿತು.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಬಸವರಾಜ್, ಗೌರವಾನ್ವಿತ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ, ಮಂಗಳೂರು, ಗೌರವ ಉಪಸ್ಥಿತಿ ಶ್ರೀ ಅಮಿತ್ ಸಿಂಗ್, ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ಪಶ್ಚಿಮ ವಲಯ, ಮಂಗಳೂರು, ಶ್ರೀ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್, ಪೊಲೀಸ್ ಆಯುಕ್ತರು, ಮಂಗಳೂರು ನಗರ ಮತ್ತು ಡಾ. ಅರುಣ್ ಕೆ. ಐಪಿಎಸ್, ಪೊಲೀಸ್ ಅಧೀಕ್ಷಕರು, ದಕ್ಷಿಣ ಕನ್ನಡ ಜಿಲ್ಲೆ, ಅರಣ್ಯ ಇಲಾಖೆಯ ಸಿಸಿಎಫ್ ಶ್ರೀ ಕರಿಕಾಲನ್ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿರಿಯ, ಕಿರಿಯ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರು ಮತ್ತು ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಅಧಿಕಾರಿಗಳು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಬಸವರಾಜ್, ಗೌರವಾನ್ವಿತ ನ್ಯಾಯಾಧೀಶರು ಮಾತನಾಡುತ್ತಾ ನೊಂದವರ ಧ್ವನಿಯಾಗಿ ದಿನದ 24 ಗಂಟೆಯೂ ಸೇವೆ ಸಲ್ಲಿಸುವ ಇಲಾಖೆ ಪೊಲೀಸ್ ಇಲಾಖೆ. ಸಮಾಜದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲು ಪೊಲೀಸರು ಹಗಲು ಇರುಳು ಶ್ರಮಿಸುತ್ತಿದ್ದಾರೆ. 2001 ರಲ್ಲಿ ಸಂಸತ್ ಭವನದ ಮೇಲೆ ದಾಳಿಯಾದಾಗ, 2008 ರಲ್ಲಿ ತಾಜ್ ಹೊಟೇಲ್ ಮೇಲೆ ದಾಳಿಯಾದಾಗ ಪೊಲೀಸರು ಉತ್ತಮ ಕರ್ತವ್ಯ ನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೆ, ಕೊರೊನಾ ಸಂದರ್ಭದಲ್ಲಿ ಪೊಲೀಸರು ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದರು ಎಂದು ಶ್ಲಾಘಿಸಿದರು. ದಿನಾಂಕ: 01-09-2024 ರಿಂದ 31-08-2025 ರ ಅವಧಿಯಲ್ಲಿ ಭಾರತದಲ್ಲಿ ಒಟ್ಟು 191 ಪೊಲೀಸರು ಹುತಾತ್ಮರಾಗಿದ್ದು, ಕರ್ನಾಟಕ ರಾಜ್ಯದಲ್ಲಿ 08 ಪೊಲೀಸರು ಹುತಾತ್ಮರಾಗಿದ್ದು, ಅವರನ್ನು ಸ್ಮರಿಸಿ ಗೌರವ ವಂದನೆ ಸಲ್ಲಿಸಲಾಯಿತು.

- Advertisement -

Latest News

error: Content is protected !!