- Advertisement -
- Advertisement -
ಮಂಗಳೂರು: ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸಂಪುಟ ದರ್ಜೆಯ ಸಚಿವರ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ‘ತಾತ್ಕಾಲಿಕ ಕೆಂಪು ವಲಯ’ ಎಂದು ಘೋಷಿಸಿ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ವ್ಯಾಪ್ತಿಯಲ್ಲಿ ಯಾವುದೇ ಮಾದರಿಯ ಡ್ರೋನ್ ಹಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸೆಪ್ಟೆಂಬರ್ 17 ರಂದು ಸಂಜೆ 4:00 ಗಂಟೆಯಿಂದ ಸೆಪ್ಟೆಂಬರ್ 19 ರಂದು ಬೆಳಿಗ್ಗೆ 10:00 ಗಂಟೆಯವರೆಗೆ ಈ ಕಟ್ಟುನಿಟ್ಟಿನ ನಿಯಮ ಜಾರಿಯಲ್ಲಿರಲಿದೆ.
ರೆಡ್ ಝೋನ್ ವ್ಯಾಪ್ತಿಗೆ ಒಳಪಡುವ ಪ್ರದೇಶಗಳು: ಮುಖ್ಯಮಂತ್ರಿಗಳು ಹಾಗೂ ಸಚಿವರ ಭೇಟಿಯ ಹಿನ್ನೆಲೆಯಲ್ಲಿ ಈ ಕೆಳಗಿನ ಮೂರು ಸ್ಥಳಗಳ ಸುತ್ತಲಿನ 1 ಕಿಲೋಮೀಟರ್ ವ್ಯಾಪ್ತಿಯನ್ನು ತಾತ್ಕಾಲಿಕ ಕೆಂಪು ವಲಯ ಎಂದು ಗುರುತಿಸಲಾಗಿದೆ.
- ಮೇರಿಹಿಲ್ ಹೆಲಿಪ್ಯಾಡ್ ಸುತ್ತಲಿನ 1 ಕಿ.ಮೀ ವ್ಯಾಪ್ತಿ ಹೋಟೇಲ್ ತಾಜ್ ವಿವಾಂತ (ಮುಖ್ಯಮಂತ್ರಿಯವರ ವಾಸ್ತವ್ಯದ ಸ್ಥಳ) ಸುತ್ತಲಿನ 1 ಕಿ.ಮೀ ವ್ಯಾಪ್ತಿ
- ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ – ಪಡೀಲ್ (ರಾಜ್ಯ ಸಚಿವ ಸಂಪುಟ ಸಭೆ ನಡೆಯುವ ಸ್ಥಳ) ಸುತ್ತಲಿನ 1 ಕಿ.ಮೀ ವ್ಯಾಪ್ತಿ
- ನಿಯಮಿತ ಅವಧಿಯಲ್ಲಿ ಈ ಪ್ರದೇಶಗಳಲ್ಲಿ ಪ್ರಚಾರ, ವೀಡಿಯೋಗ್ರಫಿ ಅಥವಾ ಯಾವುದೇ ಖಾಸಗಿ ಉದ್ದೇಶಕ್ಕಾಗಿ ಡ್ರೋನ್ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಡ್ರೋನ್ ಹಾರಾಟ ನಡೆಸುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.
- Advertisement -


