Wednesday, August 26, 2026
Homeಕರಾವಳಿಮಂಗಳೂರುಮಂಗಳೂರು: ತೊಕ್ಕೊಟ್ಟಿನ ಹೋಟೆಲೊಂದರ ಸಾಂಬಾರಿನಲ್ಲಿ ಜಿರಳೆ ಪತ್ತೆ: ಆಹಾರ ಸುರಕ್ಷತಾ ಇಲಾಖೆಯಿಂದ ದಿಢೀರ್ ದಾಳಿ, ನೋಟಿಸ್...

ಮಂಗಳೂರು: ತೊಕ್ಕೊಟ್ಟಿನ ಹೋಟೆಲೊಂದರ ಸಾಂಬಾರಿನಲ್ಲಿ ಜಿರಳೆ ಪತ್ತೆ: ಆಹಾರ ಸುರಕ್ಷತಾ ಇಲಾಖೆಯಿಂದ ದಿಢೀರ್ ದಾಳಿ, ನೋಟಿಸ್ ಜಾರಿ

- Advertisement -
- Advertisement -

ಮಂಗಳೂರು: ಊಟದ ಸಾಂಬಾರಿನಲ್ಲಿ ಜಿರಳೆ ಬಿದ್ದಿದೆ ಎಂದು ಗ್ರಾಹಕರು ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ತೊಕ್ಕೊಟ್ಟುವಿನ ಹೋಟೆಲೊಂದಕ್ಕೆ ದಿಢೀರ್ ದಾಳಿ ನಡೆಸಿ ಅಡುಗೆ ಕೋಣೆಯನ್ನು ತಪಾಸಣೆ ನಡೆಸಿದ್ದಾರೆ.

ತಪಾಸಣೆ ವೇಳೆ ಅಡುಗೆ ಕೋಣೆಯಲ್ಲಿ ತೀವ್ರ ಅಶುಚಿತ್ವ ಕಂಡುಬಂದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರಿಗೆ ಇಲಾಖೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಆಹಾರ ಪದಾರ್ಥಗಳನ್ನು ದಾಸ್ತಾನು ಮಾಡಲು ಪ್ರತ್ಯೇಕ ಕೊಠಡಿ ಇಲ್ಲದೆ, ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ರಾಶಿ ಹಾಕಿರುವುದು ಕಂಡುಬಂದಿದೆ. ಈ ಕೂಡಲೇ ಎಲ್ಲವನ್ನೂ ತೆರವುಗೊಳಿಸಿ ಶುಚಿತ್ವ ಕಾಪಾಡುವಂತೆ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

ನಿಯಮ ಉಲ್ಲಂಘಿಸಿರುವ ಹೋಟೆಲ್ ವಿರುದ್ಧ ಹೆಚ್ಚುವರಿ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ. ಸಾರ್ವಜನಿಕ ಆರೋಗ್ಯದ ಜೊತೆ ಆಟವಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ.

- Advertisement -

Latest News

error: Content is protected !!