Wednesday, July 3, 2024
Homeಕರಾವಳಿಅದಾಯಕ್ಕಿಂತ ಹೆಚ್ಚಿನ ಆಸ್ತಿ: ಬೆಳ್ತಂಗಡಿಯ ಹಿಂದಿನ ವೃತ್ತ ನಿರೀಕ್ಷಕ ಗಂಗಿರೆಡ್ಡಿ ಗೆ ಶಿಕ್ಷೆ ಪ್ರಕಟ

ಅದಾಯಕ್ಕಿಂತ ಹೆಚ್ಚಿನ ಆಸ್ತಿ: ಬೆಳ್ತಂಗಡಿಯ ಹಿಂದಿನ ವೃತ್ತ ನಿರೀಕ್ಷಕ ಗಂಗಿರೆಡ್ಡಿ ಗೆ ಶಿಕ್ಷೆ ಪ್ರಕಟ

spot_img
- Advertisement -
- Advertisement -

ಮಂಗಳೂರು: 11 ವರ್ಷದ ಹಿಂದೆ ಇದೆ ದಿನ (ದಿನಾಂಕ 27-08-2009) ಬೆಳ್ತಂಗಡಿಯಲ್ಲಿ ಪೋಲಿಸ್ ವೃತ್ತ ನಿರೀಕ್ಷಕರಾಗಿದ್ದ ಗಂಗಿರೆಡ್ಡಿ ಸಂದರ್ಭದಲ್ಲಿ ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ಆಗಿನ ಲೋಕಾಯುಕ್ತ ಡಿ. ವೈ.ಎಸ್.ಪಿ. ಸದಾನಂದ ವರ್ಣೇಕರ್ ಮತ್ತು ಅವರ ತಂಡ ದಾಳಿ ನಡೆಸಿದ್ದರು. ನಂತರ ಕೇಸು ದಾಖಲಿಸಿ ಹಲವು ದಾಖಲೆಗಳನ್ನು ವಶ ಪಡಿಸಿಕೊಂಡಿದ್ದರು. ಪ್ರಕರಣದ ವಿಚಾರಣೆ ಇಂದಿಗೆ ಮುಗಿದಿದ್ದು, ಆರೋಪಿ ಗಂಗಿರೆಡ್ಡಿ ಅಪರಾಧ ಎಸಗಿದ್ದಾರೆಂದು ಸಾಬೀತಾಗಿದೆ.

ಅಪರಾಧಿ ಗಂಗಿರೆಡ್ಡಿ

ಆಪರಾಧಿ ಗಂಗಿ ರೆಡ್ಡಿಗೆ 4 ವರ್ಷ ಸಾದಾ ಸಜೆ ಮತ್ತು ರೂ 5,00,000/-ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಸಾದಾ ಸಜೆ ವಿಧಿಸಿದೆ.

ಸುಮಾರು 19 ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಡಿ.ವೈ.ಎಸ್.ಪಿ. ಆಗಿದ್ದ ಎಮ್.ವಿಠಲ್ ದಾಸ್ ಪೈ ಆರೋಪಿ ಗಂಗಿ ರೆಡ್ಡಿ ವಿರುದ್ದ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಅಭಿಯೋಜನೆಯ ಪರವಾಗಿ 22 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಭೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರಿಂದ ಶಿಕ್ಷೆ ಪ್ರಕಟವಾಗಿದೆ.

ನ್ಯಾಯಾಧೀಶರು 111 ಪುಟಗಳ ಸುದೀರ್ಘ ಆದೇಶ ನೀಡಿದ್ದು,. ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 13 (1) (ಇ) ರ ಅಡಿಯಲ್ಲಿ ಆರೋಪಿ ಗಂಗಿ ರೆಡ್ಡಿ ಅಪರಾಧ ಎಸಗಿದ್ದಾರೆಂದು ಸಾಬೀತಾಗಿದೆ.

ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.

- Advertisement -
spot_img

Latest News

error: Content is protected !!