- Advertisement -


- Advertisement -
ಮಂಗಳೂರು; ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರಿಗೆ ಕಾರು ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಮುಡಿಪು ಬಳಿ ನಡೆದಿದೆ.ಅಳೇಕಲ ನಿವಾಸಿ ಅಬ್ದುಲ್ ಖಾದರ್ (66) ಮೃತರು.
ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರಿಂದ ಖಾದರ್ ಅವರನ್ನು ಕಾರು ಚಾಲಕ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮೃತರು ಪತ್ನಿ ಮೂರು ಗಂಡು, ಎರಡು ಹೆಣ್ಣು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
- Advertisement -


