Saturday, October 3, 2026
Homeಕರಾವಳಿಮಂಗಳೂರುಮಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವು

ಮಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ಸಾವು

- Advertisement -
- Advertisement -

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ತಡಂಬೈಲ್ ಬಳಿ ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರು ಮೃತಪಟ್ಟ ಭೀಕರ ಘಟನೆ ಸಂಭವಿಸಿದೆ.

ಅತ್ತಾವರದಲ್ಲಿರುವ ಮಗಳ ಮನೆಗೆ ತೆರಳಲು ತಮ್ಮ ಪುತ್ರಿ ಸ್ವಾತಿ ಹಾಗೂ ಮೊಮ್ಮಗಳೊಂದಿಗೆ ರಸ್ತೆ ದಾಟುತ್ತಿದ್ದ 71 ವರ್ಷದ ದುರ್ಗೋಜಿ ರಾವ್ ಮೃತಪಟ್ಟ ದುರದೃಷ್ಟಕರ ವೃದ್ಧ.

ಉಡುಪಿ ಕಡೆಯಿಂದ ಸುರತ್ಕಲ್ ಕಡೆಗೆ ತೆರಳುತ್ತಿದ್ದ ಕಾರನ್ನು ಚಾಲಕ ಸಚೀನ್ ಎಂಬಾತ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಡಿವೈಡರ್ ಮೇಲೆ ಬಿದ್ದು ತಲೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗೊಂಡಿದ್ದ ದುರ್ಗೋಜಿ ರಾವ್ ಅವರನ್ನು ತಕ್ಷಣವೇ ಮುಕ್ಕದ ಶ್ರೀನಿವಾಸ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮಾರ್ಗಮಧ್ಯದಲ್ಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಘಟನೆ ಸಂಬಂಧ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!