Wednesday, June 24, 2026
HomeUncategorizedಮಂಗಳೂರು: . ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್...

ಮಂಗಳೂರು: . ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದಾತ ಅಂದರ್

- Advertisement -
- Advertisement -

ಮಂಗಳೂರು: . ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದಾತನ ಅಂದರ್ ಆಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಫೇಸ್‌ಬುಕ್‌ನಲ್ಲಿ ಬೇರೊಬ್ಬರು ಹಂಚಿಕೊಂಡ ಪೋಸ್ಟ್‌ಗೆ ‘ಶಂಕರ್‌11916’ ಎಂಬ ಖಾತೆಯಿಂದ ‘ಸಪೋರ್ಟ್‌ ಮಾಡಿ ಬ್ರೋ. ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡುತ್ತೇನೆ ಈ ರೀತಿ ಕಮೆಂಟ್‌ ಮಾಡಲಾಗಿತ್ತು. ಮೊಹಮ್ಮದ್ ರಿಯಾಜ್ ಕಡಂಬು ಅವರು ಈ ಕುರಿತು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡು, ‘ಆರೋಪಿಯನ್ನು ಪೊಲೀಸರು ಕೂಡಲೇ ಬಂಧಿಸುತ್ತಾರೆ ಎಂದು ಭಾವಿಸುತ್ತೇನೆ. ಯಾವುದಕ್ಕೂ ಉಳ್ಳಾಲ ಮಸೀದಿಗಳ ಬಳಿ ಬಾಂಬ್ ಪತ್ತೆ ದಳವನ್ನು ಕಳುಹಿಸಿ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಬೇಕು‘ ಎಂದು ಒತ್ತಾಯಿಸಿದ್ದರು.

‘ಈ ಮಾಹಿತಿ ಹಂಚಿಕೊಂಡಿದ್ದಕ್ಕೆ ಧನ್ಯವಾದ ತಿಳಿಸಿರುವ ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್ ರೆಡ್ಡಿ, ‘ಉಳ್ಳಾಲ ಮಸೀದಿ ಬಳಿ ಬಾಂಬ್‌ ಸ್ಫೋಟಿಸುತ್ತೇನೆ ಎಂಬ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು ಅಪರಾಧ. ಉಳ್ಳಾಲ ಠಾಣೆಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸುತ್ತಾರೆ ಎಂದಿದ್ದರು. ಅದರ ಬೆನ್ನಲ್ಲೇ ಆರೋಪಿಯ್ನು ಬಂಧಿಸಿಲಾಗಿದೆ.

- Advertisement -

Latest News

error: Content is protected !!