Saturday, August 29, 2026
Homeಕರಾವಳಿಮಂಗಳೂರುಮಂಗಳೂರು: ಉಳ್ಳಾಲದಲ್ಲಿ ಸಮುದ್ರ ಪಾಲಾಗುತ್ತಿದ್ದ ನಾಲ್ವರು ಯುವತಿಯರ ರಕ್ಷಣೆ

ಮಂಗಳೂರು: ಉಳ್ಳಾಲದಲ್ಲಿ ಸಮುದ್ರ ಪಾಲಾಗುತ್ತಿದ್ದ ನಾಲ್ವರು ಯುವತಿಯರ ರಕ್ಷಣೆ

- Advertisement -
- Advertisement -

ಮಂಗಳೂರು: ಉಳ್ಳಾಲದಲ್ಲಿ ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರು ನಾಯಂಡನ ಹಳ್ಳಿಯ ಸವಿತಾ (38), ಸೌಮ್ಯಾ (39), ಬಿಂದು(20), ಪದ್ಮಿನಿ(38) ಮತ್ತು ಮಂಜುಳ(35) ಎಂಬ ಐವರು ಯುವತಿಯರು ಭಾನುವಾರ ಬೆಳಿಗ್ಗೆ ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ಮಧ್ಯಾಹ್ನ ವೇಳೆ ಉಳ್ಳಾಲ ಸಮುದ್ರ ತೀರಕ್ಕೆ ತೆರಳಿದ್ದರು. ಐವರು ಯುವತಿಯರು ಸಮುದ್ರ ತೀರದಲ್ಲಿ ಕುಳಿತ್ತಿದ್ದ ವೇಳೆ ಬೃಹತ್ ಗಾತ್ರದ ಅಲೆಯೊಂದು ತೀರಕ್ಕೆ ಅಪ್ಪಳಿಸಿದ್ದು ಸವಿತಾ, ಸೌಮ್ಯ, ಬಿಂದು, ಪದ್ಮಿನಿ ನೀರು ಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಈಜುಗಾರರು ನಾಲ್ವರು ಯುವತಿಯರನ್ನ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪದ್ಮಿನಿ ಸ್ಥಿತಿ ಸ್ವಲ್ಪ ಗಂಭೀರಗೊಂಡಿದ್ದು ಉಳಿದವರು ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!