Wednesday, June 24, 2026
Homeಕರಾವಳಿಮಂಗಳೂರುಮಂಗಳೂರು; ವಿದೇಶದಲ್ಲಿ  ಕೆಲಸ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ; ಇಬ್ಬರು ಆರೋಪಿಗಳನ್ನು ಮುಂಬೈನಲ್ಲಿ ಬಂಧಿಸಿದ...

ಮಂಗಳೂರು; ವಿದೇಶದಲ್ಲಿ  ಕೆಲಸ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ; ಇಬ್ಬರು ಆರೋಪಿಗಳನ್ನು ಮುಂಬೈನಲ್ಲಿ ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು; ವಿದೇಶದಲ್ಲಿ  ಕೆಲಸ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಮುಂಬೈನ ದಿಲ್ ಶಾದ್ ಅಬ್ದುಲ್ ಸತ್ತಾರ್ ಖಾನ್ (45)  ಸಾಹುಕಾರಿ ಕಿಶೋರ್ ಕುಮಾರ್ (34) ಬಂಧಿತರು.

ಆರೋಪಿಗಳು ಮಂಗಳೂರಿನ ಬೆಂದೂರ್ ವೆಲ್ ನಲ್ಲಿ ಹೈಯರ್ ಗ್ರೋ ಇಂಟರ್ನ್ಯಾಷನಲ್ ಸಂಸ್ಥೆ ಕಚೇರಿ ತೆರೆದು ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ, ವೀಸಾ ಮಾಡಿಸುವುದಾಗಿ ಅನೇಕ ಮಂದಿಯಿಂದ ಹಣ ಪಡೆದುಕೊಂಡಿದ್ದರು. ಸುಮಾರು 282 ಮಂದಿ ಮೋಸ ಹೋಗಿದ್ದರು. 4 ಕೋಟಿ 50 ಲಕ್ಷ ರೂ ವಂಚನೆ ನಡೆದಿತ್ತು.ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಸಂದರ್ಭ ತನಿಖೆ ನಡೆಸಿದ ಪೊಲೀಸರು ವಸೀಉಲ್ಲಾ‌ಖಾನ್ ಎಂಬಾತನನ್ನ ಬಂಧಿಸಿ ಜೈಲಿಗೆ ತಳ್ಳಿದ್ದರು.

ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಆದೇಶದಂತೆ ಮಂಗಳೂರು ಸಿಸಿಬಿ ಪೊಲೀಸರು ತನಿಖೆಯನ್ನು ಮುಂದುವರಿಸಿ ಮುಂಬೈಗೆ ತೆರಳಿ ಇಡೀ ಜಾಲದ ಸೂತ್ರಧಾರಿಗಳಾದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!