Friday, May 3, 2024
Homeಕರಾವಳಿ"ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೊರೋನ ಚಿಕಿತ್ಸೆ"

“ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೊರೋನ ಚಿಕಿತ್ಸೆ”

spot_img
- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನಕ್ಕೆ ಎಲ್ಲಾ ಆಸ್ಪತ್ರೆಗಳಲ್ಲಿಯೂ ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ಸಿಗುವಂತಾಗಲು ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಯೋಜನೆಗೆ ಕಡ್ಡಾಯವಾಗಿ ಎರಡು ವಾರದೊಳಗೆ ನೋಂದಣಿ ಮಾಡಿಕೊಳ್ಳಬೇಕು. ಇಲ್ಲವಾದರೆ, ಅಂತಹ ಆಸ್ಪತ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ದ.ಕ. ಜಿಲ್ಲಾಡಳಿತದ ವತಿಯಿಂದ ಕೋವಿಡ್ 19, ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ವಿಚಾರ ಕುರಿತ ಚರ್ಚಾ ಕಾರ್ಯಕ್ರಮವನ್ನು ಟೌನ್‌ ಹಾಲ್‌‌ನಲ್ಲಿ ಉದ್ಘಾಟಿಸಿ ಮಾತನಾಡಿದರು.

ವೆನ್ಲಾಕ್‌‌ ಆಸ್ಪತ್ರೆಯ ಜೊತೆ ಜಿಲ್ಲಾಡಳಿತ ಸೇರಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್, ಮತ್ತು ಮಂಗಳೂರು ನಗರ ನಿಗಮ ಜಂಟಿಯಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದವು.

ಮಾತನಾಡಿದ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು, ಜಿಲ್ಲೆಯಲ್ಲಿ ಕೊರೊನಾ ಸೋಂಕನ್ನು ನಿಯಂತ್ರಿಸಬೇಕಾಗಿದೆ. ಅಲ್ಲದೇ, ಮೂಲಭೂತ ಅವಶ್ಯಕತೆಗಳತ್ತ ಗಮನಹರಿಸಲು ಮುಖ್ಯಮಂತ್ರಿಗಳು ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 17,776 ಕೊರೊನಾ ಪ್ರಕರಣಗಳು ದಾಖಲಾಗಿವೆ. ದ.ಕ. ಜಿಲ್ಲೆಯಲ್ಲಿ ಒಟ್ಟು 95 ಖಾಸಗಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, 32 ಆಸ್ಪತ್ರೆಗಳು ಇತರ ರೋಗಗಳಿಗೆ ಅನ್ವಯವಾಗುವಂತೆ ಆುುಷ್ಮಾನ್ ಯೋಜನೆ ನೋಂದಣಿ ಮಾಡಿದೆ.

ಆದರೆ, ಕೊರೋನ ಚಿಕಿತ್ಸೆಗಾಗಿ 8 ಮೆಡಿಕಲ್ ಕಾಲೇಜು ಆಸ್ಪತ್ರೆ ಸೇರಿದಂತೆ ಇಟ್ಟು 12 ಆಸ್ಪತ್ರೆಗಳು ಮಾತ್ರ ನೋಂದಣಿ ಮಾಡಿವೆ. ಉಳಿದ 12 ಆಸ್ಪತ್ರೆಗಳು ನೋಂದಣಿ ಪ್ರಕ್ರಿಯೆ ನಡೆಸುತ್ತಿದೆ. ಆದರೆ, ಮುಂದಿನ ಎರಡು ವಾರ ದೊಳಗೆ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳು ಕೂಡ ಕೊರೋನ ಚಿಕಿತ್ಸೆಯ ಕಾರಣಕ್ಕಾಗಿ ಆಯುಷ್ಮಾನ್‌ಗೆ ಸೀಮಿತಗೊಳಿಸಿ ನೋಂದಣಿ ಕಡ್ಡಾಯವಾಗಿ ಮಾಡಬೇಕು.

ಕೊರೊನಾ ಕಾರಣದಿಂದ ಚಿಕಿತ್ಸೆ ನೀಡುವ ಆಸ್ಪತ್ರೆಯವರು ದುಬಾರಿ ಮೊತ್ತ ಪಡೆಯುತ್ತಿದ್ದಾರೆ ಎಂಬ ಆರೋಪವಿದೆ. ಇದು ನಿಜವಾಗಿದ್ದರೆ ತನಿಖೆ ನಡೆಸಿ ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕರೋನ ಚಿಕಿತ್ಸೆ ಪಡೆಯುವ ರೋಗಿಗಳನ್ನು ಸಂಬಂಧಪಟ್ಟ ಆಯಂಬುಲೆನ್ಸ್‌ನ ಚಾಲಕರು ಕಡ್ಡಾಯವಾಗಿ ಆಯುಷ್ಮಾನ್ ಯೋಜನೆ ಇರುವ ಆಸ್ಪತ್ರೆಯಲ್ಲಿಯೇ ದಾಖಲು ಮಾಡಬೇಕು.

ಎಲ್ಲಾ ಆಸ್ಪತ್ರೆಗಳಲ್ಲಿಯೂ ನೋಡೆಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಅವರು ಕಡ್ಡಾಯವಾಗಿ ಜನರ ಕರೆ ಸ್ವೀಕರಿಸಿ ಸೂಕ್ತ ವ್ಯವಸ್ಥೆ ಜನರಿಗೆ ಮಾಡಬೇಕು. ಇಲ್ಲವಾದರೆ ಅಂತವರಿಗೆ ನೋಟೀಸ್ ಜಾರಿಗೊಳಿಸಿ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.

- Advertisement -
spot_img

Latest News

error: Content is protected !!