Friday, January 27, 2023
Homeಕರಾವಳಿಮಂಗಳೂರು:ಸಕಲ ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧನ ಅಂತ್ಯಕ್ರಿಯೆ

ಮಂಗಳೂರು:ಸಕಲ ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧನ ಅಂತ್ಯಕ್ರಿಯೆ

- Advertisement -
- Advertisement -

ಮಂಗಳೂರು: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಹೃದಯಾಘಾತದಿಂದ ಹುತಾತ್ಮರಾದ ಮಂಗಳೂರಿನ ಯೋಧ ಮುರಳೀಧರ್ ರೈಯವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬುಧವಾರ ಶಕ್ತಿನಗರದಲ್ಲಿ ನೆರವೇರಿತು.

ನಗರದ ಖಾಸಗಿ ಆಸ್ಪತ್ರೆಯಲ್ಲಿದ್ದ ಪಾರ್ಥಿವ ಶರೀರವನ್ನು ಶಕ್ತಿನಗರದ ಮುಗ್ರೋಡಿ ಸಂಜಯನಗರದ ಅವರ ಮನೆಯಿಂದ ಮೆರವಣಿಗೆ ಮೂಲಕ ಆಂಜನೇಯ ಸಭಾಭವನ ಮೈದಾನಕ್ಕೆ ತಂದು ಸಾರ್ವಜನಿಕ ದರ್ಶನಕ್ಕಾಗಿ ಇಡಲಾಯಿತು.  ಬಳಿಕ ಸರಕಾರಿ ಗೌರವ ಸಲ್ಲಿಸಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಈ ವೇಳೆ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್, ಶಾಸಕ ವೇದವ್ಯಾಸ ಕಾಮತ್, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಪಾಲಿಕೆಯ ಸದಸ್ಯರಾದ ಶಕೀಲಾ ಕಾವಾ, ಸುಧೀರ್ ಶೆಟ್ಟಿ, ವನಿತಾ ಪ್ರಸಾದ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!