- Advertisement -
![]()
- Advertisement -
ಮಂಗಳೂರು; MRPL ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ ದುರಂತ ಸಂಭವಿಸಿದೆ.
ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ . ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್ ಬದಲಾವಣೆ ಪರಿಶೀಲನೆಗೆ ತೆರಳಿದ್ದ ಕಾರ್ಮಿಕ ವಾಪಾಸ್ ಬಾರದೇ ಇದ್ದುದನ್ನು ಕಂಡು ಇನ್ನಿಬ್ಬರು ಕಾರ್ಮಿಕರು ತೆರಳಿದ್ದಾರೆ ಈ ವೇಳೆ ಮೂವರು ಅಸ್ವಸ್ಥಗೊಂಡಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಈ ಸಂದರ್ಭ ದಾರಿ ಮಧ್ಯೆ ಇಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದಾರೆ, ಓರ್ವನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
- Advertisement -


