Friday, June 26, 2026
Homeಕರಾವಳಿಮಂಗಳೂರುಮಂಗಳೂರು; ತಡೆಗೋಡೆ ನಿರ್ಮಾಣದ ಕಾಮಗಾರಿ ವೇಳೆ ಗುಡ್ಡ ಕುಸಿತ; ಕಾರ್ಮಿಕ ಸಾವು

ಮಂಗಳೂರು; ತಡೆಗೋಡೆ ನಿರ್ಮಾಣದ ಕಾಮಗಾರಿ ವೇಳೆ ಗುಡ್ಡ ಕುಸಿತ; ಕಾರ್ಮಿಕ ಸಾವು

- Advertisement -
- Advertisement -

ಮಂಗಳೂರು; ತಡೆಗೋಡೆ ನಿರ್ಮಾಣದ ಕಾಮಗಾರಿ ವೇಳೆ ಗುಡ್ಡ ಕುಸಿತವಾಗಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉಳ್ಳಾಲದ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕು ಹನುಮಕಟ್ಟೆ ನಿವಾಸಿ ಬಾಳಪ್ಪ ಮೃತರು. ಮನೆಯೊಂದರ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ದುರಂತ ನಡೆದಿದೆ.

ಮಂಗಳವಾರ ಜೆಸಿಬಿ ಸಹಿತ ವಲಸೆ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ, ಶಿವು ಎಂಬವರು ತಡೆಗೋಡೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದರು. ಈ ವೇಳೆ ಮನೆಯ ಹಿಂಭಾಗದ ಎತ್ತರದ ಗುಡ್ಡದ ಮಣ್ಣು ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ ಮಣ್ಣಿನಡಿ ಸಿಲುಕಿದ್ದಾರೆ. ಹನುಮಂತ ಮತ್ತು ಭೀಮಪ್ಪ ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪಾರಾಗಿದ್ದು, ಮಣ್ಣಿನಡಿ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಳಪ್ಪನನ್ನ ಸ್ಥಳೀಯರು ಹರಸಾಹಸ ಪಟ್ಟು ಹೊರ ತೆಗೆದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

- Advertisement -

Latest News

error: Content is protected !!