- Advertisement -
- Advertisement -
ಮಂಗಳೂರು: ಶಾಲಾ ಮಕ್ಕಳ ಸುರಕ್ಷತೆ ಕಡೆಗಣಿಸಿ, ನಿಯಮಬಾಹಿರವಾಗಿ ಸಾಮರ್ಥ್ಯಕ್ಕಿಂತ ಅಧಿಕ ಮಕ್ಕಳನ್ನು ತುಂಬಿಕೊಂಡು ಸಾಗಿಸುತ್ತಿದ್ದ ಖಾಸಗಿ ವಾಹನಗಳ ವಿರುದ್ಧ ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ, 30 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನಿಯಮ ಉಲ್ಲಂಘಿಸಿದ ವ್ಯಾನ್, ಆಟೋ ಹಾಗೂ ಇತರೆ ವಾಹನಗಳ ಮಾಲೀಕರಿಗೆ ನೋಂದಣಿ ಪ್ರಮಾಣಪತ್ರ (RC) ಏಕೆ ಅಮಾನತುಗೊಳಿಸಬಾರದು ಎಂದು ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇಂತಹ ತಪಾಸಣೆಗಳು ಮುಂದೆಯೂ ಮುಂದುವರಿಯಲಿವೆ ಎಂದು ಹಿರಿಯ ಆರ್ಟಿಒ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
- Advertisement -


