Friday, October 2, 2026
Homeಕರಾವಳಿಮಂಗಳೂರುಮಂಗಳೂರು ಜೈಲಿನಲ್ಲಿ ಮಾಡೂರು ಯೂಸುಫ್‌ ಕೊಲೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ

ಮಂಗಳೂರು ಜೈಲಿನಲ್ಲಿ ಮಾಡೂರು ಯೂಸುಫ್‌ ಕೊಲೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಮಂಗಳೂರು ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ಮಾಡೂರು ಯೂಸುಫ್‌ನನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ಹಾಗೂ ತಲಾ 76,000 RS ದಂಡ ವಿಧಿಸಿ ಗುರುವಾರ ತೀರ್ಪು ನೀಡಿದೆ. ನ್ಯಾಯಾಧೀಶ ಜಗದೀಶ್ ವಿ.ಎನ್ ಈ ಆದೇಶ ಹೊರಡಿಸಿದ್ದಾರೆ.

ಲಿತೇಶ್ ಪೂಜಾರಿ (ಸೂರಿಂಜೆ), ಶೋಭರಾಜ್ (ಸುರತ್ಕಲ್), ಯುವರಾಜ್ (ಶಿಬರೂರು), ಪ್ರದೀಪ್ (ಉಳಾಯಿಬೆಟ್ಟು) ಹಾಗೂ ಉಮೇಶ್ ಕೊಂಬಾರು (ಸುಳ್ಯ) ಶಿಕ್ಷೆಗೆ ಗುರಿಯಾದ ಆರೋಪಿಗಳು.

ಜಿಲ್ಲಾ ಕಾರಾಗೃಹದ ಒಳಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಮಾಡೂರು ಯೂಸುಫ್‌ನನ್ನು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಎಸಿಪಿ ತಿಲಕಚಂದ್ರ ಅವರು ಒಟ್ಟು 10 ಆರೋಪಿಗಳ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಐವರ ಮೇಲಿನ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಶರಣ್ ಪೂಜಾರಿ, ಮಹೇಶ್ ಕುಮಾರ್, ಕಮಲಾಕ್ಷ, ಲತೀಶ್ ಹಾಗೂ ವಿಚಾರಣೆ ಹಂತದಲ್ಲೇ ಮೃತಪಟ್ಟ ಸತೀಶ್ ಪೂಜಾರಿಯನ್ನು ಖುಲಾಸೆಗೊಳಿಸಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕ ಮೋಹನ್ ವಾದ ಮಂಡಿಸಿದ್ದರು.

- Advertisement -

Latest News

error: Content is protected !!