ಮಂಗಳೂರು; ಕದ್ರಿ ಪೊಲೀಸರ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಎರ್ನಾಕುಲಂನ ಜೂಡ್ ಮಾಥ್ಯೂ(20)
ದಿನಾಂಕ 17-01-2026 ರಂದು ಮಂಗಳೂರು ಪೂರ್ವ ಠಾಣಾಧಿಕಾರಿಯವರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಕೈಲಾಸ ಕಾಲೋನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಹಿಂದೆ ಇರುವ ಖಾಲಿ ಜಾಗದಲ್ಲಿ ಯುವಕನೊಬ್ಬನು ಬೈಕ್ ನಲ್ಲಿ ನಿಷೇಧಿತ MDMA ಎಂಬ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆಂದು ಖಚಿತ ಮಾಹಿತಿ ಬಂದ ಮೇರೆಗೆ ಸಿಬ್ಬಂದಿ ಜೊತೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು 5.20 ಗ್ರಾಂ ತೂಕದ MDMA ಮಾದಕ ವಸ್ತು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಪಲ್ಸರ್ ಎನ್.ಎಸ್ ಬೈಕ್ ಸಮೇತ ಒಟ್ಟು ರೂ 70,000/- ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.


