Tuesday, August 11, 2026
Homeಕರಾವಳಿಮಂಗಳೂರುಮಂಗಳೂರು: ಕೋರ್ದಗಬ್ಬು ದೈವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ: ಖತರ್ನಾಕ್ ಕಳ್ಳನ ಬಂಧನ

ಮಂಗಳೂರು: ಕೋರ್ದಗಬ್ಬು ದೈವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ: ಖತರ್ನಾಕ್ ಕಳ್ಳನ ಬಂಧನ

- Advertisement -
- Advertisement -

ಮಂಗಳೂರು: ಸುರತ್ಕಲ್‌ನ ಮಧ್ಯ ಕೊಡಿಪಾಡಿಯಲ್ಲಿರುವ ಕೋರ್ದಗಬ್ಬು ದೈವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ ತಾಲೂಕಿನ ಕುಕ್ಕಿಹಳ್ಳಿ ನಿವಾಸಿ ಸುಖೇಶ್ ನಾಯ್ಕ್ (40) ಬಂಧಿತ ಆರೋಪಿ.

ಆಗಸ್ಟ್ 5 ರಂದು ಬೆಳಗಿನ ಜಾವ ದೈವಸ್ಥಾನದ ಬಾಗಿಲು ಮತ್ತು ಕಿಟಕಿ ಮುರಿದು ಒಳನುಗ್ಗಿದ್ದ ಆರೋಪಿ, ಸುಮಾರು ₹15,000 ನಗದು ಹಣವಿದ್ದ ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದನು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಸುರತ್ಕಲ್ ಪೊಲೀಸರು, ಆಗಸ್ಟ್ 10 ರಂದು ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಒಪ್ಪಿಕೊಂಡಿದ್ದಾನೆ.

ಬಂಧಿತ ಸುಖೇಶ್ ನಾಯ್ಕ್ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಈಗಾಗಲೇ 18 ಕಳವು ಪ್ರಕರಣಗಳು ದಾಖಲಾಗಿದ್ದು, ಒಂದರಲ್ಲಿ ಶಿಕ್ಷೆಯಾಗಿದೆ. ಅಲ್ಲದೆ ಈತನ ವಿರುದ್ಧ ಹಲವು ದಸ್ತಗಿರಿ ವಾರಂಟ್‌ಗಳು ಬಾಕಿ ಇರುವುದು ತಿಳಿದುಬಂದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -

Latest News

error: Content is protected !!