Saturday, July 25, 2026
Homeಕರಾವಳಿಮಂಗಳೂರುಮಂಗಳೂರು : ಲಾಲ್‌ಬಾಗ್ ಸಿಗ್ನಲ್ ಸಮೀಪ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ; ಗಾಯಾಳು ಆಸ್ಪತ್ರೆಗೆ ದಾಖಲು...

ಮಂಗಳೂರು : ಲಾಲ್‌ಬಾಗ್ ಸಿಗ್ನಲ್ ಸಮೀಪ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ; ಗಾಯಾಳು ಆಸ್ಪತ್ರೆಗೆ ದಾಖಲು ; ಆರೋಪಿಗಾಗಿ ಶೋಧ

- Advertisement -
- Advertisement -

ಮಂಗಳೂರು : ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಜು.25 ರಂದು ಮಧ್ಯಾಹ್ನ ಸುಮಾರು 1:45 ಗಂಟೆಗೆ  ನಡೆದ ಮಚ್ಚಿನಿಂದ ಹಲ್ಲೆ ಪ್ರಕರಣದಲ್ಲಿ ಪ್ರಾಥಮಿಕ ಮಾಹಿತಿಯಂತೆ ರೌಡಿ ಶೀಟರ್ ಮಂಗಳೂರು ನಿವಾಸಿ ವಿಕ್ಕಿ ಬಪ್ಪಲ್ (35) ಎಂಬಾತ ಗಾಯಗೊಂಡಿದ್ದಾನೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಕ್ಕಿ ಬಬ್ಬನ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಾಳುವನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುತ್ತಿಗೆಯ ಭಾಗದಲ್ಲಿ ಆಳವಾದ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಎಲ್ಲಾ ಚೆಕ್‌ಪೋಸ್ಟ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ. ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಸಂಬಂಧ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗುವುದು. ಪ್ರಕರಣದ ತನಿಖೆಯನ್ನು ಮಂಗಳೂರು ದಕ್ಷಿಣ ವಿಭಾಗದ ಪೊಲೀಸರು ನಡೆಸಲಿದ್ದಾರೆ.

- Advertisement -

Latest News

error: Content is protected !!