Saturday, August 29, 2026
Homeಕರಾವಳಿಮಂಗಳೂರುಮಂಗಳೂರು: ಅಂಗಡಿಯಲ್ಲಿ ಕೂಡಿ ಹಾಕಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ:  ಪೋಕ್ಸೊ ಕಾಯ್ದೆಯಡಿ ಆರೋಪಿ ಅರೆಸ್ಟ್

ಮಂಗಳೂರು: ಅಂಗಡಿಯಲ್ಲಿ ಕೂಡಿ ಹಾಕಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ:  ಪೋಕ್ಸೊ ಕಾಯ್ದೆಯಡಿ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು: ಅಂಗಡಿಯಲ್ಲಿ ಕೂಡಿ ಹಾಕಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆಪೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.ಚೊಕ್ಕಬೆಟ್ಟು ನಿವಾಸಿ ಅಬ್ದುಲ್ ಇಸ್ಮಾಯೀಲ್ ಬಂಧಿತ ಆರೋಪಿ.

ಚೊಕ್ಕಬೆಟ್ಟು ಪೇಟೆಯಲ್ಲಿ ಹನಿ ಫ್ಯಾಶನ್ ಮತ್ತು ಜನರಲ್ ಸ್ಟೋರ್ ನಡೆಸಿಕೊಂಡಿರುವ ಆರೋಪಿ  ತನ್ನ ಅಂಗಡಿಗೆ ಚಾಕಲೇಟು ಖರೀದಿಸಲೆಂದು ಬಂದಿದ್ದ 11 ವರ್ಷದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಒಂದು ಕೊಠಡಿಯಲ್ಲಿ ಕೂಡಿಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕನ ತಾಯಿ ಸುರತ್ಕಲ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಕಲಂ 4, 6 ಪೊಕ್ಸೊ ಹಾಗೂ 351(2), 117(2) ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿಲಾಗಿದೆ.

- Advertisement -

Latest News

error: Content is protected !!