Wednesday, June 24, 2026
Homeಕರಾವಳಿಮಂಗಳೂರುಮಂಗಳೂರು : ರಸ್ತೆಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಟ್ರೇಲರ್ ಡಿಕ್ಕಿ ; ತಾಯಿ ಹಾಗೂ ಮಗಳಿಗೆ ಗಂಭೀರ...

ಮಂಗಳೂರು : ರಸ್ತೆಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಟ್ರೇಲರ್ ಡಿಕ್ಕಿ ; ತಾಯಿ ಹಾಗೂ ಮಗಳಿಗೆ ಗಂಭೀರ ಗಾಯ

- Advertisement -
- Advertisement -

ಮಂಗಳೂರು : ರಸ್ತೆಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಟ್ರೇಲರ್ ಡಿಕ್ಕಿಯಾಗಿ ತಾಯಿ ಹಾಗೂ ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಮುಲ್ಕಿಯ ಪಾವಂಜೆ ದೇವಸ್ಥಾನದ ಬಳಿ ಶುಕ್ರವಾರ ಸಂಜೆ ನಡೆದಿದೆ. ಗಾಯಗೊಂಡವರನ್ನು ಶಿಕ್ಷಕಿ ಕುಸುಮಾ ಮತ್ತು ಅವರ ಪುತ್ರಿ ಸುಮಲತಾ (14) ಎಂದು ಗುರುತಿಸಲಾಗಿದೆ.

ಇವರಿಬ್ಬರು ಪಾವಂಜೆಯಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಟ್ರೇಲರ್ ನಿಯಂತ್ರಣ ತಪ್ಪಿ ಅವರಿಗೆ ಡಿಕ್ಕಿ ಹೊಡೆದಿದೆ. ಕುಸುಮಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸುಮಲತಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಉತ್ತರ ಸಂಚಾರ ಪೊಲೀಸ್ ನಿರೀಕ್ಷಕ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣವಾದ ಟ್ರೇಲರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

Latest News

error: Content is protected !!