Sunday, June 7, 2026
Homeಕರಾವಳಿಮಂಗಳೂರು: ತೊಕ್ಕೊಟ್ಟು ಓವರ್‌ ಬ್ರಿಡ್ಜ್‌ನಲ್ಲಿ ಬೈಕ್-ಲಾರಿ ನಡುವೆ ಅಪಘಾತ, ನವದಂಪತಿ ಸಾವು

ಮಂಗಳೂರು: ತೊಕ್ಕೊಟ್ಟು ಓವರ್‌ ಬ್ರಿಡ್ಜ್‌ನಲ್ಲಿ ಬೈಕ್-ಲಾರಿ ನಡುವೆ ಅಪಘಾತ, ನವದಂಪತಿ ಸಾವು

- Advertisement -
- Advertisement -

ಮಂಗಳೂರು: ಇತ್ತೀಚೆಗಷ್ಟೇ ದಾಂಪತ್ಯ ಜೀವನ ಆರಂಭಿಸಿದ್ದ ನವಜೋಡಿಯೊಂದು ಕೆಲಸ ಮುಗಿಸಿ ಮನೆಗೆ ತಮ್ಮ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೃಹತ್ ಗಾತ್ರದ ಟ್ರಕ್ ಒಂದು ಗುದ್ದಿದ ಕಾರಣ ನವದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್‌ನಲ್ಲಿ ಇಂದು ಸಂಜೆ ಸಂಭವಿಸಿದೆ.

ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್ (30) ಮತ್ತು ಪ್ರಿಯಾ ಫೆರ್ನಾಂಡಿಸ್ (32) ಮೃತ ಜೋಡಿ.

ನಗರದ ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ಈ ಇಬ್ಬರು, ಸಂಜೆ ತಮ್ಮ ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರಲೇನ್‌ನಲ್ಲಿರುವ ಬಾಡಿಗೆ ಮನೆಗೆ ಬೈಕ್ ನಲ್ಲಿ ತೆರಳಯವ ಸಂದರ್ಭ ಅತಿ ವೇಗವಾಗಿ ತೊಕ್ಕೊಟ್ಟು ಫ್ಲೈಓವರ್ ಮೂಲಕ ಬಂದ ಲಾರಿ ಢಿಕ್ಕಿ ಹೊಡೆದು, ಇಬ್ಬರ ಮೇಲೂ ಚಲಿಸಿ ಕೆಲ ಮೀ. ದೂರಕ್ಕೆ ಎಳೆದುಕೊಂಡು ಹೋಗಿ ನಿಂತಿದೆ. ಘಟನೆಯಿಂದ ಪ್ರಿಯಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಯಾನ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

ತೊಕ್ಕೊಟ್ಟು ಓವರ್ ಬ್ರಿಡ್ಜ್‌ ಕೊನೆಗೊಳ್ಳುವಾಗ ಇರುವ ಅವೈಜ್ಞಾನಿಕ ತಿರುವಿನಿಂದಾಗಿ ಈ ಅಪಘಾತಗಳು ಸಂಭವಿಸುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!