Sunday, August 2, 2026
Homeಕರಾವಳಿಮಂಗಳೂರುಬೆಳ್ತಂಗಡಿ : ರೆಖ್ಯಾ ಆನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ಪರಿಹಾರ ಚೆಕ್ ವಿತರಣೆ

ಬೆಳ್ತಂಗಡಿ : ರೆಖ್ಯಾ ಆನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ಪರಿಹಾರ ಚೆಕ್ ವಿತರಣೆ

- Advertisement -
- Advertisement -

ಬೆಳ್ತಂಗಡಿ: ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಬಾಲಕೃಷ್ಣ ಗೌಡ(55) ಅವರು ಆ.1ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಸೇರಿದಂತೆ ಅಧಿಕಾರಿ ವರ್ಗದವರು ಆ.2 ರಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಅರಣ್ಯ ಇಲಾಖೆ ವತಿಯಿಂದ ರೂ.5 ಲಕ್ಷ ಪರಿಹಾರ ಧನದ ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಶಾಸಕ ಹರೀಶ್ ಪೂಂಜ ಮೂಲಕ ಹಸ್ತಾಂತರಿಸಲಾಯಿತು. ಉಳಿದ ರೂ.15 ಲಕ್ಷ ಪರಿಹಾರವನ್ನು ನೇರವಾಗಿ ಮೃತರ ವಾರೀಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಮತ್ತು ಪ್ರತಿ ತಿಂಗಳು ವಾರಿಸುದಾರರಿಗೆ 5 ಸಾವಿರ ಹಣ ಸಿಗುವಂತೆ ಮಾಡಲಾಗುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ (DFO) ರವಿಶಂಕ‌ರ್, ಪುತ್ತೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಸುಬ್ಬಯ್ಯ ನಾಯ್ಕ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ (RFO) ರಾಘವೇಂದ್ರ ಎಚ್.ಪಿ,ಬೆಳ್ತಂಗಡಿ ತಹಶೀಲ್ದಾರ್ ಎಸ್‌.ಎನ್. ನರಗುಂದ,ಆಡಳಿತಾಧಿಕಾರಿ ವಿಜೇತ್ ಜೈನ್, ಪಿಡಿಒ ರಾಘವೇಂದ್ರ ಗೌಡ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಘಟನಾ ಸ್ಥಳಕ್ಕೆ ಕೂಡ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ., ಉಪವಲಯ ಅರಣ್ಯಾಧಿಕಾರಿಗಳು, ಧರ್ಮಸ್ಥಳ ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್ ಸಮರ್ಥ ಗಾಣಿಗೇರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

Latest News

error: Content is protected !!