- Advertisement -
- Advertisement -
ಮಂಗಳೂರು; ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿಂದು 43 ಮಂದಿಯ ಗಂಟಲು ದ್ರವ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿದೆ. ಈ ಹಿಂದೆ ಕಳುಹಿಸಲಾದ 16 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ ಎಲ್ಲವೂ ನೆಗೆಟಿವ್ ಬಂದಿದೆ. ಈವರೆಗೆ 239 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 9 ಪಾಸಿಟಿವ್ ಮತ್ತು 230 ನೆಗೆಟಿವ್ ಬಂದಿತ್ತು.

ಇಂದು 72 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38,518 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್ನಲ್ಲಿ 4,727 ಮಂದಿ ಇದ್ದು 21 ಮಂದಿ ಇಎಸ್ಐ ಆಸ್ಪತ್ರೆ ಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ. ಇಂದಿಗೆ 630 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
- Advertisement -