Wednesday, June 24, 2026
Homeಕರಾವಳಿಮಂಗಳೂರುಮಂಗಳೂರು; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು

ಮಂಗಳೂರು; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು

- Advertisement -
- Advertisement -

ಮಂಗಳೂರು; ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ಮೊಹಮ್ಮದ್ ಷರೀಫ್ ರವರ ಮನೆಯಲ್ಲಿ ದಿನಾಂಕ 23-09-2025 ರಂದು ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳೂರು ತಾಲೂಕಿನ ಕಳವಾರು ನಿವಾಸಿ ಅಬ್ದುಲ್ ನಾಸೀರ್ @ ನಾಸಿರ್ @ ನಾಚಿ (31), ಮೊಹಮ್ಮದ್ ಷರೀಫ್ ರವರ ಸಂಬಂಧಿ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್ ಬಂಧಿತ ಆರೋಪಿಗಳು.

ಪ್ರಕರಣದ ವಿವರ:

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ಮೊಹಮ್ಮದ್ ಷರೀಫ್ ರವರು ತನ್ನ ಸಂಬಂಧಿಕರ ಮೆಹಂದಿ ಕಾರ್ಯಕ್ರಮಕ್ಕೆ ಕಳವಾರಿಗೆ ಹೋದಾಗ ರಾತ್ರಿ ಮನೆಯಲ್ಲಿದ್ದ ಸುಮಾರು 23 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 1,25,000/- ರೂಪಾಯಿ ನಗದು ಹಣ ಕಳ್ಳತನವಾಗಿತ್ತು. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಮೊ.ನಂ 176/2025 ಕಲಂ ಕಲಂ 331(3), 331(4), 305 BNS 2023 ರಂತೆ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿದ ಪೊಲೀಸರು ಕಳವಾರು ನಿವಾಸಿ ಅಬ್ದುಲ್ ನಾಸೀರ್ ನನ್ನು ಬಂಧಿಸಿದ್ದಾರೆ. ಇನ್ನು ನಾಸರ್

ಕಳ್ಳತನ ಮಾಡಿ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ LOC ಹೊರಡಿಸಲಾಗಿತ್ತು. ಅದರಂತೆ ಅಬ್ದುಲ್ ನಾಸೀರ್ @ ನಾಚಿ ಎಂಬಾತನನ್ನು LOC ಯಲ್ಲಿ ಪತ್ತೆ ಮಾಡಿ ವಿಚಾರಣೆ ನಡೆಸಿದಾಗ ಕಳ್ಳತನವಾದ ಮನೆ ಮಾಲೀಕ ಮೊಹಮ್ಮದ್ ಷರೀಫ್ ರವರ ಸಂಬಂಧಿ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್ ಮತ್ತು ತಾನು ಸೇರಿ ಈ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಆರೋಪಿತರಿಂದ ಸುಮಾರು 27 ಲಕ್ಷ ರೂಪಾಯಿ ಮೌಲ್ಯದ 222 ಗ್ರಾಂ ತೂಕದ ಚಿನ್ನವನ್ನು, 20,000/- ರೂಪಾಯಿ ನಗದು ಹಣ, ಸುಮಾರು 50,000/- ರೂಪಾಯಿ ಮೌಲ್ಯದ ಸ್ಕೂಟರ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಆರೋಪಿತರನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

- Advertisement -

Latest News

error: Content is protected !!