- Advertisement -


- Advertisement -
ಮಂಗಳೂರು: ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
- ಪ್ರಕರಣ 1: ಪಂಪ್‌ವೆಲ್-ನಂತೂರು ಸರ್ವಿಸ್ ರಸ್ತೆಯಲ್ಲಿ ಆಟೋ ರಿಕ್ಷಾದಲ್ಲಿ MDMA ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಮೊಹಮ್ಮದ್ ಇರ್ಷಾದ್ (30) ಎಂಬಾತನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಯಿಂದ ₹1.36 ಲಕ್ಷ ಮೌಲ್ಯದ 13.69 ಗ್ರಾಂ MDMA, ಆಟೋ ರಿಕ್ಷಾ ಹಾಗೂ ನಗದು ಸೇರಿದಂತೆ ಒಟ್ಟು ₹2.94 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
- ಪ್ರಕರಣ 2: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಿತಿನ್ ಕೃಷ್ಣನ್ (27) ಎಂಬಾತನನ್ನು ಸುರತ್ಕಲ್ ಪೊಲೀಸರು ಕದ್ರಿ ಬಳಿ ಬಂಧಿಸಿದ್ದಾರೆ. ಆರೋಪಿಯಿಂದ ₹60,000 ಮೌಲ್ಯದ 1.206 ಕೆ.ಜಿ ಗಾಂಜಾ, ಕೆಟಿಎಂ ಬೈಕ್ ಹಾಗೂ ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ.
ಇಬ್ಬರೂ ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
- Advertisement -


