Thursday, June 4, 2026
Homeಕರಾವಳಿಜೂ.1ರಿಂದ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಓಡಾಟ ಆರಂಭ: ದಿಲ್‌ರಾಜ್ ಆಳ್ವ

ಜೂ.1ರಿಂದ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಓಡಾಟ ಆರಂಭ: ದಿಲ್‌ರಾಜ್ ಆಳ್ವ

- Advertisement -
- Advertisement -

ಮಂಗಳೂರು: ಜಿಲ್ಲೆಯಲ್ಲಿ ಈಗಾಗಲೇ ಸರಕಾರಿ ಬಸ್‌ಗಳು ಓಡಾಟ ಆರಂಭಿಸಿವೆ. ಅದರಂತೆ ಜೂನ್ 1ರಿಂದ ಮಂಗಳೂರು ನಗರ ಸಹಿತ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಓಡಾಟ ಆರಂಭಗೊಳ್ಳಲಿದೆ ಎಂದು ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭಕ್ಕೆ ಜಿಲ್ಲಾಡಳಿತ ಇದುವರೆಗೆ ಯಾವುದೇ ಮಾರ್ಗಸೂಚಿ ನೀಡಿಲ್ಲ. ಕೊರೋನಾ ಹಿನ್ನೆಲೆಯಲ್ಲಿ ಸರಕಾರ ನಿರ್ದಿಷ್ಟ ಮಾರ್ಗಸೂಚಿ ನೀಡಿದರೆ ಅದರಂತೆ ಬಸ್ ಓಡಾಟ ನಡೆಸಬೇಕಾಗುತ್ತದೆ. ಜೂ. 1ರಂದು ಎಲ್ಲ ರೂಟ್‌ಗಳಲ್ಲಿ ಬಸ್ ಸಂಚಾರ ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಆದರೆ, ಏಕಕಾಲದಲ್ಲಿ ಎಲ್ಲ ಬಸ್‌ಗಳನ್ನು ರಸ್ತೆಗೆ ಇಳಿಸುವುದಿಲ್ಲ. ಒಂದು ರೂಟ್‌ನಲ್ಲಿ ಬಸ್‌ಗೆ ಪರವಾನಗಿ ಇದ್ದರೆ, ಮೂರು ಬಸ್‌ಗಳನ್ನು ಓಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಬಸ್ ಸಂಚಾರ ಆರಂಭಗೊಂಡರೆ ಪ್ರಯಾಣಿಕರ ಸಂಖ್ಯೆ ಎಷ್ಟಿರಬೇಕು, ಬಸ್ ದರ ಏರಿಕೆ, ಸ್ಯಾನಿಟೈಸರ್ ಬಳಕೆ, ನಿಲುಗಡೆ ಕುರಿತಾಗಿ ಬಸ್ ಮಾಲಕರು ಜಿಲ್ಲಾಡಳಿತದ ನಿರ್ದೇಶನಕ್ಕೆ ಕಾಯುತ್ತಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಂಡು ಮಾರ್ಗಸೂಚಿ ಬಿಡುಗಡೆಗೊಳಿಸಿದರೆ ಬಸ್ ಸಂಚಾರ ವ್ಯವಸ್ಥಿತವಾಗಿ ನಡೆಸಲು ಅನುಕೂಲವಾಗುತ್ತದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

- Advertisement -

Latest News

error: Content is protected !!