Saturday, June 27, 2026
HomeUncategorizedಮಂಗಳೂರು; ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಬಸ್ ಸ್ಕೂಟರ್ ಗೆ ಡಿಕ್ಕಿ; ಸ್ಕೂಟರ್ ಸವಾರ ಇನ್ಫೋಸಿಸ್ ಉದ್ಯೋಗಿ...

ಮಂಗಳೂರು; ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಬಸ್ ಸ್ಕೂಟರ್ ಗೆ ಡಿಕ್ಕಿ; ಸ್ಕೂಟರ್ ಸವಾರ ಇನ್ಫೋಸಿಸ್ ಉದ್ಯೋಗಿ ಸಾವು

- Advertisement -
- Advertisement -

ಮಂಗಳೂರು; ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಬಸ್ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಇನ್ಫೋಸಿಸ್ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಕೊಣಾಜೆ ಸಮೀಪದ ನಾಟೆಕಲ್ ತಿರುವಿನಲ್ಲಿ ನಡೆದಿದೆ. ಘಟನೆ ಸಹಸವಾರೆ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಕುವೆಂಪುನಗರ ನಿವಾಸಿ ಪ್ರಜ್ವಲ್ ಅರ್ನಾಲ್ಡ್ (30) ಮೃತರು.ಶಿವಮೊಗ್ಗದ ಸಾಗರದ ಅಕ್ಷತಾ ಗಾಯಗೊಂಡವರು.

ಮಂಪ್ರಜ್ವಲ್ ಹಾಗೂ ಅಕ್ಷತಾ ಕೊಣಾಜೆ ಕಂಬಳಪದವಿನಲ್ಲಿರುವ ಇನ್ಫೋಸಿಸ್ ಕ್ಯಾಪಸ್ ನಲ್ಲಿ ಕೆಲಸ ಮುಗಿಸಿ ಸ್ಕೂಟರ್ ನಲ್ಲಿ  ಮಂಗಳೂರಿನ ಕಡೆ ಬರುತ್ತಿದ್ದಾಗ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಸೇರಿದ ಬಸ್

ಅತಿವೇಗವಾಗಿ ಬಂದು ಸ್ಕೂಟರ್ ಗೆ ಡಿಕ್ಕಿಯಾಗಿದೆ.ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗ ಎಸೆಯಲ್ಪಟ್ಟಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಸ್ ನಲ್ಲಿದ್ದ15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

:

- Advertisement -

Latest News

error: Content is protected !!