Thursday, June 4, 2026
Homeಕರಾವಳಿಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನವಿಟ್ಟು ವಂಚಿಸಿದ ಪ್ರಕರಣ; ಆಡಳಿತ ಮಂಡಳಿಯಿಂದ ಸ್ಪಷ್ಟನೆ

ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನವಿಟ್ಟು ವಂಚಿಸಿದ ಪ್ರಕರಣ; ಆಡಳಿತ ಮಂಡಳಿಯಿಂದ ಸ್ಪಷ್ಟನೆ

- Advertisement -
- Advertisement -

ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನವಿಟ್ಟು ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆಡಳಿತ ಮಂಡಳಿ  ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಂಘದ ಆಡಳಿತ ಮಂಡಳಿ  ನಮ್ಮ ಸಂಘದಲ್ಲಿ ಇಂತಹ ಒಂದು ಘಟನೆ ಆಗಿದೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ಘಟನೆ ಬಗ್ಗೆ ನಾವು ಕಾನೂನು ರೀತಿಯಲ್ಲಿ ಎಲ್ಲಾ ಕ್ರಮಕೈಗೊಂಡಿದ್ದೇವೆ. ಯಾರ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕು ಅದನ್ನು ಕೂಡ ನಮ್ಮ ಸಂಘದ ಆಡಳಿತ ಮಂಡಳಿಯ ಸಭೆ ಕರೆದು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

 ಮುಂದೆ ನಡೆಯುವ ಚುನಾವಣೆಯ ದೃಷ್ಟಿಯಿಂದ ಇಂತಹ ಕೃತ್ಯಗಳನ್ನು ಮಾಡಲಾಗುತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನಮಗೆ ಪೊಲೀಸರ ಮೇಲೆ ಮತ್ತು ನ್ಯಾಯಾಲಯದ ಮೇಲೆ ಗೌರವ, ನಂಬಿಕೆ ಇದೆ ಎಂದಿದ್ದಾರೆ.

- Advertisement -

Latest News

error: Content is protected !!