Friday, June 5, 2026
Homeಕರಾವಳಿಮಂಗಳೂರು: SSLC ಪರೀಕ್ಷೆ ಬರೆಯಲು ಕೇರಳದಿಂದ ಬಂದ 367 ಮಕ್ಕಳು

ಮಂಗಳೂರು: SSLC ಪರೀಕ್ಷೆ ಬರೆಯಲು ಕೇರಳದಿಂದ ಬಂದ 367 ಮಕ್ಕಳು

- Advertisement -
- Advertisement -

ಮಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್ಸಿ ಪರೀಕ್ಷೆ ಆರಂಭವಾಗಿದೆ ಕೊರೋನಾ ಆತಂಕದ ನಡುವೆಯೂ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯಲು ಆಗಮಿಸಿದ್ದಾರೆ.

ರಾಜ್ಯದಲ್ಲಿ ಓದುತ್ತಿರುವ ಕೇರಳ ರಾಜ್ಯದ ಗಡಿ ಗ್ರಾಮಗಳ 367 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆಗಮಿಸಿದ್ದಾರೆ. ಎಲ್ಲಾ 367 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು ಅವರನ್ನು ತಲಪಾಡಿ ಚೆಕ್ ಪೋಸ್ಟ್ ನಿಂದ ಬಸ್ ನಲ್ಲಿ ಕರೆದುಕೊಂಡು ಬರಲಾಗಿದೆ.

ಈ ಕುರಿತ ಮಾಹಿತಿಯನ್ನು ಸಚಿವ ಸುರೇಶ್ ಕುಮಾರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವೆಂದೇ ಹೇಳಲಾಗುವ ಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದು, ಈ ಸಲ ಗೈರು ಹಾಜರಾದವರಿಗೆ ಆಗಸ್ಟ್ ನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು.

- Advertisement -

Latest News

error: Content is protected !!