Saturday, June 6, 2026
Homeಕರಾವಳಿಮಂಗಳೂರು;9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು;9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ಮಂಗಳೂರು;9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆಮಂಗಳೂರಿನ ಕಣ್ಣೂರು ಅಡ್ಯಾರ್‌ ನಿವಾಸಿ ಹಸೈನಾರ್‌ ಆಲಿಯಾಸ್‌ ಹಸೈನ್‌(35) ಬಂಧಿತ ಆರೋಪಿ.

ಹಸೈನ್ 2012ರಲ್ಲಿ ಯುವತಿಯೊಬ್ಬಳು ಲೇಡಿಹಿಲ್‌ ಸಮೀಪ ಫ್ಲ್ಯಾಟ್‌ ಕಡೆಗೆ ಹೋಗುತ್ತಿದ್ದಾಗ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಉರ್ವ ಠಾಣೆಗೆ ಯುವತಿ ದೂರು ನೀಡಿದ್ದಳು. ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ನಂತರ ಆತ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಈತನಿಗೆ 2014ರ ಅ.18ರಂದು 4 ತಿಂಗಳ ಕಾರಾಗೃಹ ಶಿಕ್ಷೆ ತೀರ್ಪು ಪ್ರಕಟವಾಗಿತ್ತು.ಆದರೆ ಆರೋಪಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ವಾರಂಟ್‌ ಹೊರಡಿಸಲಾಗಿದ್ದು, ಈ ಹಿನ್ನೆಲೆ ಈತನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!