Wednesday, June 24, 2026
Homeಕರಾವಳಿಮಂಗಳೂರುಮಂಗಳೂರು;  ಮನೆಯ ಹಂಚನ್ನು ತೆಗೆದು ಮನೆಯ ಒಳಗೆ ಪ್ರವೇಶಿಸಿ ವೃದ್ಧೆಯನ್ನು ಬೆದರಿಸಿ ಚಿನ್ನಾಭರಣ ಹಾಗೂ ನಗದು...

ಮಂಗಳೂರು;  ಮನೆಯ ಹಂಚನ್ನು ತೆಗೆದು ಮನೆಯ ಒಳಗೆ ಪ್ರವೇಶಿಸಿ ವೃದ್ಧೆಯನ್ನು ಬೆದರಿಸಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು;  ಮನೆಯ ಹಂಚನ್ನು ತೆಗೆದು ಮನೆಯ ಒಳಗೆ ಪ್ರವೇಶಿಸಿ ವೃದ್ಧೆಯನ್ನು ಬೆದರಿಸಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿರುವ ಘಟನೆ ಸುರತ್ಕಲ್ ನ ಸಸಿಹಿತ್ಲು ರಸ್ತೆಯ ಮಿತ್ರ ಪಟ್ಣ ಎಂಬಲ್ಲಿರುವ ಜಲಜ ಎಂಬವರ ಮನೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿಲಾಗಿದೆ.

ಶೈನ್ ಎಚ್. ಪುತ್ರನ್ @ ಶಯನ್ @ ಶೈನ್, (21) ಜೈಸನ್ @ ಲೆನ್ಸನ್ ಕಾರ್ಕಳ, ವಿನೋದ್ @ ಕೋತಿ @ ವಿನೋದ್ ಕುಮಾರ್ (33) ಬಂಧಿತ ಆರೋಪಿಗಳು.

ಪ್ರಕರಣದ ವಿವರ; ಸುರತ್ಕಲ್ ನ ಸಸಿಹಿತ್ಲು ರಸ್ತೆಯ ಮಿತ್ರ ಪಟ್ಣ ಎಂಬಲ್ಲಿರುವ ಜಯಲಕ್ಷ್ಮೀ ನಿವಾಸದ ಶ್ರೀಮತಿ ಜಲಜ(85) ಅವರ ಮನೆಗೆ ದಿನಾಂಕ: 03-12-2025 ರಂದು ಸುಮಾರು 02.30 ಗಂಟೆಗೆ ಯಾರೋ ಅಪರಿಚಿತರು ಮನೆಯ ಬಾಗಿಲು ಬಡಿದು ಕುಡಿಯಲು ನೀರು ಬೇಕು ಬಾಗಿಲು ತೆರೆಯಿರಿ ಎಂದು ಹೇಳಿದ್ದಾರೆ.  ಆದರೆ ಜಲಜ ಅವರು ಬಾಗಿಲು ತೆಗೆಯದೇ ಇದ್ದುದರಿಂದ ಆರೋಪಿಗಳು ಮನೆಯ ಹಂಚನ್ನು ತೆಗೆದು ಮನೆಯ ಒಳಗೆ ಪ್ರವೇಶಿಸಿ ಜಲಜ ಅವರ ಬಳಿ “ಬಂಗಾರ್ ಒಲ್ಪ ಉಂಡು” (ಬಂಗಾರ ಎಲ್ಲಿದೆ) ಎಂದು ತುಳುವಿನಲ್ಲಿ ಜೋರಾಗಿ ಬೆದರಿಸಿ, ಬೈರಾಸನ್ನು ಅವರ ಕುತ್ತಿಗೆಗೆ ಬಿಗಿದು “ಬೊಬ್ಬೆ ಪಾಡುಂಡ ಕೆರ್ಪೆ ಬಂಗಾರ್ ಇಜ್ಜಾ ಉಂಡಾ ತೂಪ ಎಂಕುಲ್ ಏರೆನ್ಲಾ ಲೆತ್ತ್ಂಡ ನಾಲಿಡ್ ಪತ್ತ್ದ್ ಕೆರ್ಪೆ” (ಬೊಬ್ಬೆ ಹೊಡೆದರೆ ಸಾಯಿಸುತ್ತೇನೆ ಬಂಗಾರ ಇದೆಯೋ ಇಲ್ಲವೋ ನೋಡುತ್ತೇನೆ ಯಾರನ್ನಾದರೂ ಕರೆದರೆ ಕುತ್ತಿಗೆ ಹಿಸುಕಿ ಸಾಯಿಸುತ್ತೇನೆ) ಎಂದು ತುಳುವಿನಲ್ಲಿ ಬೆದರಿಸಿ ಗೋದ್ರೇಜ್ ನಲ್ಲಿದ್ದ ಸುಮಾರು 16 ಗ್ರಾಂ ತೂಕದ ಚಿನ್ನದ ಸರ, 20 ಗ್ರಾಂ ತೂಕದ 2 ಚಿನ್ನದ ಬಳೆ ಹಾಗೂ ಪರ್ಸ್ ನಲ್ಲಿ ಸುಮಾರು 14,000/- ರೂಪಾಯಿ ನಗದು ಹಣವನ್ನು ದೋಚಿದ್ದಾರೆ ಎಂದು ಸುರತ್ಕಲ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ದಿನಾಂಕ: 03.12.2025 ರಂದು ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿತರ ಪತ್ತೆಯ ಬಗ್ಗೆ ಠಾಣಾ ಪಿಎಸ್.ಐ ರಘು ನಾಯಕ, ರಾಘವೇಂದ್ರ ನಾಯ್ಕ್ ಹಾಗೂ ಸಿಬ್ಬಂದಿಯವರ ತಂಡವನ್ನು ಮಾಡಿ ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದಂತೆ ಶೈನ್ ಎಚ್. ಪುತ್ರನ್ @ ಶಯನ್ @ ಶೈನ್, ಪ್ರಾಯ 21 ವರ್ಷ, ತಂದೆ: ಹರಿಶ್ಚಂದ್ರ ಪುತ್ರನ್, ವಾಸ: ಮನೆ ನಂ 2-52/2, ಶ್ರೀ ಸನ್ನಿಧಿ, ನಿಯರ್ ಶ್ರೀ ರಾಮ ಭಜನಾ ಮಂದಿರ, ಗೊಡ್ಡೆ ಕೊಪ್ಲ, ಸುರತ್ಕಲ್ ಮಂಗಳೂರು ತಾಲೂಕು ಎಂಬಾತನ್ನು ವಶಕ್ಕೆ ಪಡೆದು ವಿಚಾರಿಸಲಾಗಿ ಆತನ ಹೇಳಿಕೆಯಂತೆ ಸದ್ರಿ ಕೃತ್ಯವನ್ನು ಜೈಸನ್ @ ಲೆನ್ಸನ್ ಕಾರ್ಕಳ ನೊಂದಿಗೆ ಮಾಡಿರುವುದಾಗಿ ಬಂಗಾರವನ್ನು ಬೆಂಗಳೂರಿಗೆ ಹೋಗಿ ಗಿರೀಶ್ ಎಸ್ ಮತ್ತು ವಿನೋದ್ ಕುಮಾರ್ ಎಂಬವರಿಗೆ ಮಾರಿದ ಬಗ್ಗೆ ತಿಳಿಸಿದಂತೆ ಬೆಂಗಳೂರಿಗೆ ತೆರಳಿ ವಿನೋದ್ @ ಕೋತಿ @ ವಿನೋದ್ ಕುಮಾರ್, ಪ್ರಾಯ 33 ವರ್ಷ, ತಂದೆ: ಕೆಂಡೆ ಗೌಡ, ವಾಸ: ಮನೆ ನಂಬ್ರ 214, 5ನೇ ಕ್ರಾಸ್, ಕಾಶಿನಗರ, ಎಲೆಚನಹಳ್ಳಿ, ಬೆಂಗಳೂರು ಹಾಗೂ ಗಿರೀಶ್ @ ಸೈಕಲ್ ಗಿರಿ, ಪ್ರಾಯ 28 ವರ್ಷ, ತಂದೆ: ನಾಗರಾಜ ವಾಸ: ನಂಬ್ರ 62, ಕನಕಪುರ, ಮೈನ್ ರಸ್ತೆ, ಉಡಿಪಾಳ್ಯ, ಬೆಂಗಳೂರು ದಕ್ಷಿಣ ರವರನ್ನು ದಿನಾಂಕ: 14.12.2025 ರಂದು ವಶಕ್ಕೆ ಪಡೆದು ಆರೋಪಿತರುಗಳಿಂದ ಕಳುವಾದ 4,43,000 ರೂ ಬೆಲೆ ಬಾಳುವ ಬಂಗಾರವನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಮೋಟಾರ್ ಸೈಕಲನ್ನು, 3 ಮೊಬೈಲ್ ಗಳು ಹಾಗೂ 3,000 ನಗದನ್ನು ಮಹಜರು ಮುಖೇನ ವಶಕ್ಕೆ ಪಡೆದುಕೊಂಡಿರುವುದಾಗಿದೆ. ಇನ್ನೊರ್ವ ಆರೋಪಿಯಾದ ಜೈಸನ್ ಯಾನೆ ಲೆನ್ಸನ್ ಕಾರ್ಕಳ ಎಂಬಾತನು ತಲೆಮರೆಸಿಕೊಂಡಿರುತ್ತಾನೆ. ಶೈನ್ ಎಚ್. ಪುತ್ರನ್ @ ಶಯನ್ @ ಶೈನ್ ಎಂಬಾತನ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಗಾಂಜಾಸೇವನೆಯ 1 ಪ್ರಕರಣ ದಾಖಲಾಗಿರುತ್ತದೆ. ವಿನೋದ್ @ ಕೋತಿ @ ವಿನೋದ್ ಕುಮಾರ್ ಎಂಬಾತನ ಮೇಲೆ ಬೆಂಗಳೂರಿನ ಕೆ.ಎಸ್.ಲೇಔಟ್ ಠಾಣೆಯಲ್ಲಿ ರೌಡಿ ತೆರೆಯಲಾಗಿರುತ್ತದೆ ಹಾಗೂ ಬೆಂಗಳೂರು ನಗರದ ವಿವಿಧ ಠಾಣೆಗಳಲ್ಲಿ 2 ಕೊಲೆ, 2 ಕೊಲೆಯತ್ನ, 4 ದರೋಡೆ, 1 ಬೆದರಿಕೆ, 1 ಗಾಂಜಾ ಮಾರಾಟ, 1 ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ಒಟ್ಟು 11 ಪ್ರಕರಣಗಳು ದಾಖಲಾಗಿರುತ್ತವೆ. ಗಿರೀಶ್ @ ಸೈಕಲ್ ಗಿರಿ ಎಂಬತನ ಮೇಲೆ ಬೆಂಗಳೂರಿನ ಕಗ್ಗಲಿಪುರ ಠಾಣೆಯಲ್ಲಿ ರೌಡಿ ತೆರೆಯಲಾಗಿರುತ್ತದೆ ಹಾಗೂ ಬೆಂಗಳೂರು ನಗರದ ವಿವಿಧ ಠಾಣೆಯಲ್ಲಿ 5 ಕೊಲೆಯತ್ನ, 1 ದರೋಡೆ, 3 ಹಲ್ಲೆ ಪ್ರಕರಣ ಸೇರಿ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿತರನ್ನು ದಿನಾಂಕ: 15.12.2025 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಮಾನ್ಯ ನ್ಯಾಯಾಲಯವು ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

 ಸದ್ರಿ ಆರೋಪಿ ಪತ್ತೆಯ ಬಗ್ಗೆ  ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು (ಉತ್ತರ ಉಪ ವಿಭಾಗ) ಶ್ರೀ ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ, ಪಿಎಸ್.ಐ ರಘುನಾಯಕ್, ರಾಘವೇಂದ್ರ ನಾಯ್ಕ್, ಎ.ಎಸ್.ಐ ಗಳಾದ ರಾಧಾಕೃಷ್ಣ, ರಾಜೇಶ್ ಆಳ್ವ ಹಾಗೂ ಠಾಣಾ ಸಿಬ್ಬಂದಿಗಳಾದ ಅಣ್ಣಪ್ಪ, ಉಮೇಶ್, ಅಜಿತ್ ಮ್ಯಾಥ್ಯೂ, ತಿರುಪತಿ, ಕಾರ್ತಿಕ್, ವಿನೋದ್ ನಾಯ್ಕ್, ಸುನೀಲ್ ಕುಸನಾಳ, ಸತೀಶ ಸತ್ತಿಗೇರಿ, ಮಂಜುನಾಥ ಬೊಮ್ಮನಾಳ, ಹನುಮಂತ ಆಲೂರ ರವರು ಪತ್ತೆಯ ಬಗ್ಗೆ ಭಾಗವಹಿಸಿರುತ್ತಾರೆ.

- Advertisement -

Latest News

error: Content is protected !!