Sunday, June 7, 2026
Homeಕರಾವಳಿಮಂಗಳೂರು: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಂಗಳಮುಖಿ ಆಯ್ಕೆ

ಮಂಗಳೂರು: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಂಗಳಮುಖಿ ಆಯ್ಕೆ

- Advertisement -
- Advertisement -

ಮಂಗಳೂರು: ಯುವ ಕಾಂಗ್ರೆಸ್‌ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಛಲವಾದಿ ಆಯ್ಕೆಯಾಗಿದ್ದು, ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ‌ ಮಂಗಳಮುಖಿವೋರ್ವರಿಗೆ ರಾಜಕೀಯ ಸ್ಥಾನ ದೊರಕಿದೆ.

ಸಂಜನಾ ಚಲವಾದಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಡೆಸಿರುವ ಯುವ ಕಾಂಗ್ರೆಸ್ ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮಹಿಳಾ ವಿಭಾಗದಿಂದ ಸ್ಪರ್ಧಿಸಿದ್ದರು. ಜನವರಿ 10, 11 ಮತ್ತು 12 ರಂದು ಆನ್​​ಲೈನ್ ಮೂಲಕ ಮತದಾನ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್, ದೀಕ್ಷಿತ್ ಪೂಜಾರಿ ಮತ್ತು ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.

ಈ ಕುರಿತು ಮಾತನಾಡಿದ ಸಂಜನಾ,”ಯೂತ್ ಕಾಂಗ್ರೆಸ್ ಸೌತ್ ಬ್ಲಾಕ್‌ನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ನನಗೆ ತುಂಬಾ ಸಂತೋಷವಾಗಿದೆ” ಎಂದು ಹೇಳಿದ್ದಾರೆ. ಇನ್ನು ಸಂಜನಾ ಅವರು ಬ್ಯೂಟಿಷಿಯನ್ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದು, ಪ್ರಸ್ತುತ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ತನಗೆ ಸಹಾಯ ಮಾಡಿದ ಮತ್ತು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 2018 ರಲ್ಲಿ ನಡೆದ ‘ಪರಿವರ್ತನ್ ಟ್ರಾನ್ಸ್ ಕ್ವೀನ್ ಸೌಂದರ್ಯ ಸ್ಪರ್ಧೆಯಲ್ಲಿ ಸಂಜನಾ ಜಯಗಳಿಸಿದ್ದರು.

- Advertisement -

Latest News

error: Content is protected !!