Wednesday, June 3, 2026
Homeಕರಾವಳಿಮಂಗಳೂರು: ತಲ್ವಾರ್ ಝಳಪಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಇಬ್ಬರ ಬಂಧನ

ಮಂಗಳೂರು: ತಲ್ವಾರ್ ಝಳಪಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಇಬ್ಬರ ಬಂಧನ

- Advertisement -
- Advertisement -

ಮಂಗಳೂರು: ತಲ್ವಾರ್ ಝಳಪಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೈ ನಿವಾಸಿ ವಿಷ್ಣು (18) ಮತ್ತು ಕಾಪಿಕಾಡ್‌ ಆಕಾಶಭವನ ನಿವಾಸಿ ವೇಣುಗೋಪಾಲ್‌ (19) ಬಂಧಿತರು.

ಆರೋಪಿಗಳು ಕಾವೂರು ಠಾಣಾ ವ್ಯಾಪ್ತಿಯ ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶದಲ್ಲಿ ಮೇ 2ರಂದು ಸಂಜೆ ವೇಳೆ  ತಲವಾರು ಝಳಪಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದರು. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿ ಕ್ಯಾಮರಾ ಮತ್ತು ಪ್ರತ್ಯಕ್ಷದರ್ಶಿಗಳ ಮಾಹಿತಿಯನ್ವಯ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದು, ಬಾಡಿ ವಾರಂಟ್‌ ಪಡೆದು ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!