
ಮಂಗಳೂರು: 2018 ರಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಉಪ್ಪಳ ನಿವಾಸಿ ಅಬೂಬಕ್ಕರ್ ಸಿದ್ದೀಕ್ @ ಕಾಪ್ರಿ ಸಿದ್ದೀಕ್ ಬಂಧಿತ ಆರೋಪಿ.
ಆರೋಪಿಯ ವಿರುದ್ಧ ಮಂಗಳೂರು ನಗರದ ಉಳ್ಳಾಲ, ಕೊಣಾಜೆ ಹಾಗೂ ಕಂಕನಾಡಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 03 NBW ವಾರಂಟ್‌ಗಳು ಬಾಕಿ ಇದ್ದವು. ಕಳವು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ NBW (Non-Bailable Warrant) ಗಳನ್ನು ತಪ್ಪಿಸಿಕೊಂಡು 2018ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ಆರೋಪಿಯ ಚಲನವಲನಗಳ ಕುರಿತು ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದ PSI ಶ್ರೀ ಸಿದ್ದಪ್ಪ ಹಾಗೂ ಸಿಬ್ಬಂದಿ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.


