Friday, July 17, 2026
Homeಕರಾವಳಿಮಂಗಳೂರುಮಂಗಳೂರು: ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಯುವಕ ಅರೆಸ್ಟ್

ಮಂಗಳೂರು: ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಯುವಕ ಅರೆಸ್ಟ್

- Advertisement -
- Advertisement -

ಮಂಗಳೂರು: ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಯುವಕನನ್ನು ಉರ್ವ ಠಾಣೆ ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಕೊಟ್ಟಾರ ಚೌಕಿ ಬಳಿ ನಡೆದಿದೆ. ಕೊಡಿಯಾಲಬೈಲು ನಿವಾಸಿ ರೋಶನ್ ಬಂಧಿತ ಆರೋಪಿ.

ಉರ್ವ ಠಾಣೆ ಪೊಲೀಸರು ಗಸ್ತಿನಲ್ಲಿದ್ದಾಗ ಮಾ.5ರಂದು ರಾತ್ರಿ 7 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಸಿಗರೇಟು ಸೇದುತ್ತಿದ್ದ ಯುವಕನನ್ನು ವಿಚಾರಿಸಿದ್ದು, ಆತನ ವರ್ತನೆ ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಮತ್ತಷ್ಟು ವಿಚಾರಿಸಿದಾಗ ಸಿಗರೇಟಿನ ಒಳಗಡೆ ಮಾದಕ ದ್ರವ್ಯ ತುಂಬಿಸಿ ಸೇದಿರುವುದನ್ನು ಒಪ್ಪಿಕೊಂಡಿದ್ದಾನೆ.

ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಆತನ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!